BIG NEWS: ನಾಯಿ ಕಚ್ಚಿದ್ದಕ್ಕೆ ದೂರು ನೀಡಿದವರ ಬೈಕ್ ಗಳಿಗೆ ಬೆಂಕಿ ಹಚ್ಚಿದ ಭೂಪ; ಮಾಲೀಕ ಅರೆಸ್ಟ್

ಬೆಂಗಳೂರು: ನಾಯಿ ಕಚ್ಚಿದ್ದಕ್ಕೆ ಪೊಲೀಸರಿಗೆ ದೂರು ನೀಡಿದ್ದ ಕಾರಣಕ್ಕೆ ದೂರು ನೀಡಿದವರ ಬೈಕ್ ಗಳಿಗೆ ಬೆಂಕಿ ಹಚ್ಚಿದ ನಾಯಿ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.

ನಂಜುಂಡ ಬಾಬು ಬಂಧಿತ ಆರೋಪಿ. ಕೊತ್ತನೂರಿನ ವೇಣುಗೋಪಾಲಸ್ವಾಮಿ ದೇವಸ್ಥಾನದ ಬಳಿ ರಸ್ತೆಯಲ್ಲಿ ಅ.23ರಂದು ಮಹಿಳೆಯೊಬ್ಬರು ನಡೆದು ಹೋಗುತ್ತಿದ್ದರು. ಈ ವೇಳೆ ನಾಯಿಯೊಂದು ದಾಳಿ ನಡೆಸಿ ಮಹಿಳೆಗೆ ಕಚ್ಚಿತ್ತು.

ಈ ಸಂಬಂಧ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಕ್ಕೆ ನಾಯಿ ಮಾಲೀಕ ರೊಚ್ಚಿಗೆದ್ದಿದ್ದು, ದೂರು ಕೊಟ್ಟವರನ್ನು ಸುಮ್ಮನೇ ಬಿಡಲ್ಲ ಎಂದು ಬೆದರಿಕೆ ಹಾಕಿದ್ದ. ಅಲ್ಲದೇ ದೂರು ನೀಡಿದವರ ಬೈಕ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದನಂತೆ. ಈ ಪ್ರಕರಣ ಸಂಬಂಧ ಕೊತ್ತನೂರು ಪೊಲೀಸರು ಈಗ ನಾಯಿ ಮಾಲೀಕನನ್ನು ಬಂಧಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read