HomeIndiaBIG NEWS: ಸಿಯಾಚಿನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಗ್ನಿವೀರ ಸಾವು; ಪರಿಹಾರ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

BIG NEWS: ಸಿಯಾಚಿನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಗ್ನಿವೀರ ಸಾವು; ಪರಿಹಾರ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಸಿಯಾಚಿನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಗ್ನಿವೀರ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ಮೃತನ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದೆ.

ಸಿಯಾಚಿನ್ ನಲ್ಲಿ ಕರ್ತವ್ಯ ನಿರ್ವಹಿಸುವಾಗ ಕಳೆದ ವಾರ ಅಗ್ನಿವೀರ ಅಕ್ಷಯ್ ಗಾವತೆ ಮೃತಪಟ್ಟಿದ್ದರು. ಮಹಾರಾಷ್ಟ್ರದ ಬುಲ್ದಾನಾ ಜಿಲ್ಲೆಯ ಪಿಂಪಲ್ ಗಾಂವ್ ನ ಸರಾಯ್ ಮೂಲದ ಅಕ್ಷಯ್ ಗಾವತೆ ಸಿಯಾಚಿನ್ ನ ಕಾರಕೋರಂ ಪರ್ವತ ಶ್ರೇಣಿಯಲ್ಲಿ ಸಮುದ್ರ ಮಟ್ಟದಿಂದ ಸುಮಾರು 20 ಸಾವಿರ ಅಡಿ ಎತ್ತರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾವತೆ ಸಾವಿಗೆ ತೀವ್ರ ಸಂತಾಪ ಸೂಚಿಸಿರುವ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ಅವರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular