HomeKarnatakaBREAKING : ಹುಲಿ ಉಗುರು ಕೇಸ್ : ನೋಟಿಸ್ ರದ್ದು ಮಾಡುವಂತೆ ಕೋರಿ ‘ಹೈಕೋರ್ಟ್’ ಮೊರೆ...

BREAKING : ಹುಲಿ ಉಗುರು ಕೇಸ್ : ನೋಟಿಸ್ ರದ್ದು ಮಾಡುವಂತೆ ಕೋರಿ ‘ಹೈಕೋರ್ಟ್’ ಮೊರೆ ಹೋದ ನಟ ಜಗ್ಗೇಶ್

ಬೆಂಗಳೂರು : ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಜಗ್ಗೇಶ್ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಅರಣ್ಯಾಧಿಕಾರಿಗಳ ಕ್ರಮ ಪ್ರಶ್ನಿಸಿ ಹೈಕೋರ್ಟ್ ಗೆ ನಟ ಜಗ್ಗೇಶ್ ಅರ್ಜಿ ಸಲ್ಲಿಸಿದ್ದು, ನೋಟಿಸ್ ರದ್ದುಪಡಿಸುವಂತೆ ಮನವಿ ಸಲ್ಲಿಸಿದ್ದಾರೆ. ಅರಣ್ಯಾಧಿಕಾರಿಗಳು ನೀಡಿದ ನೋಟಿಸ್ ಗೆ ಉತ್ತರ ನೀಡುವುದರೊಳಗೆ ಅವರು ನನ್ನ ಮನೆ ಶೋಧ ನಡೆಸಿದ್ದಾರೆ. 14 ಮಂದಿ ನನ್ನ ಮನೆಗೆ ಆಗಮಿಸಿ ನನ್ನ ಮನೆಯಲ್ಲಿದ್ದ ಕೆಲವು ವಸ್ತುಗಳನ್ನು ಚೆಲ್ಲಾಪೆಲ್ಲಿಯಾಗಿ ಮಾಡಿಹೋಗಿದ್ದಾರೆ ಅಂತ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ನಟ ಜಗ್ಗೇಶ್ ಟ್ವೀಟ್

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾನೂನು ದೊಡ್ಡದು..! ಅಧಿಕಾರಿಗಳು ಕೇಳಿದವಸ್ತು ಒಪ್ಪಿಸಲಾಗಿದೆ! ಅಮ್ಮ ನೀಡಿದ ಬಹಳ ಹಳೆಯ ಲಾಕೆಟ್ ಎಂದು ತಿಳಿಸಿರುವೆ! ಎಷ್ಟೋ ದೋಚುವ ಮನುಷ್ಯರು, ಕೊಲೆ ಪಾತಕರು, ದೇಶದ್ರೋಹಿಗಳು,ಸಮಾಜ ಘಾತಕರಿಗಿಂತ ನನ್ನತಾಯಿ ಕಾಣಿಕೆ ಬಗ್ಗೆ ನೆನ್ನೆಯಿಂದ ತಲೆಕೆಡಿಸಿಕೊಂಡ ದೇವರುಗಳಿಗೆ ಧನ್ಯವಾದ ತಲೆತಗ್ಗಿಸುವ ಯಾವ ಕೆಲಸ ಮಾಡಿಲ್ಲಾ ಮಾಡೋದಿಲ್ಲಾ!ಪಾಚ್ಕೊಳಿ ಎಂದು ನಟ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular