ಬೆಂಗಳೂರು : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಡಿ ಪಡಿತರ ಚೀಟಿ ಹೊಂದಿದ ‘ಕುಟುಂಬದ ಯಜಮಾನಿ’ ಎಂದು ಗುರುತಿಸಲ್ಪಟ್ಟ ಮಹಿಳೆಯರಿಗೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಆಗಸ್ಟ್ – 2023 ರಿಂದ ಮಾಹೆಯಾನ ರೂ.2000/- ಗಳನ್ನು ಡಿಬಿಟಿ ಮೂಲಕ ಹಣ ಜಮೆ ಮಾಡಲಾಗುತ್ತಿದೆ.
ಅರ್ಜಿ ಸಲ್ಲಿಸಿದ ಫಲಾನುಭವಿಗಳ ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ಜೋಡಣೆಯಾಗದೇ ಇ-ಕೆವೈಸಿ ಅಪ್ಡೇಟ್ ಆಗದೇ ಇರುವುದರಿಂದ ಹಣ ಜಮೆಯಾಗದೇ ಇರುವವರು ತಮ್ಮ ಖಾತೆ ಹೊಂದಿರುವ ಬ್ಯಾಂಕ್ಗಳಿಗೆ ಸಂಪರ್ಕಿಸಿ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ವಿವರಗಳನ್ನು ನೀಡಿ ಆಧಾರ್ ಜೋಡಣೆ ಮತ್ತು ಇಕೆವೈಸಿ ಅಪ್ಡೇಟ್ ಮಾಡಿಸಿಕೊಳ್ಳುವುದು ಹಾಗೂ ಫಲಾನುಭವಿಗಳು ಆಧಾರ್ ಕಾರ್ಡ್, ಪಡಿತರ ಚೀಟಿಯನ್ವಯ ಹಾಗೂ ಪಾಸ್ಪುಸ್ತಕದಲ್ಲಿರುವ ಖಾತೆದಾರರ ಹೆಸರು ಹೊಂದಾಣಿಕೆ ಮಾಡಿಸಿಕೊಳ್ಳುವಂತೆ ಯೋಜನೆಯ ಸೌಲಭ್ಯವನ್ನು ಪಡೆಯುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಪ್ರಕಟಣೆ ಹೊರಡಿಸಿದೆ.
ನಿಮ್ಮ ರೇಷನ್ ಕಾರ್ಡ್ ಗೆ KYC ಅಪ್ಡೇಟ್ ಆಗಿದೆಯೇ ಎನ್ನುವುದನ್ನು ತಿಳಿದುಕೊಳ್ಳಿ. ಆಗದೇ ಇದ್ದಲ್ಲಿ ಕೂಡಲೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗುವ ಮೂಲಕ KYC ಅಪ್ಡೇಟ್ ಮಾಡಿಸಿಕೊಳ್ಳಿ.ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿಕೊಂಡಿರುವ ಫಲಾನುಭವಿಗಳಲ್ಲಿ ಯಾರಿಗೆ ಮೊದಲ ಕಂತಿನ ಹಣ ಬಂದಿಲ್ಲ ಅಂತಹವರು ತಮ್ಮ ಬ್ಯಾಂಕ್ಗಳಲ್ಲಿ ಇ-ಕೆವೈಸಿ ಹಾಗೂ ಆಧಾರ್ ಜೋಡಣೆ ಮಾಡಿಕೊಂಡರೆ ಯೋಜನೆ ಹಣ ಜಮಾ ಆಗಲಿದೆ.
ಕುಟುಂಬ ನಿರ್ವಹಣೆಯ ಹೊಣೆಹೊತ್ತ ಮನೆಯ ಯಜಮಾನಿಯರು ನಿತ್ಯ ಎದುರಿಸುವ ಸವಾಲುಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂಬ ಉದ್ದೇಶದಿಂದ ನಮ್ಮ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ ರೂ. 2,000 ಧನಸಹಾಯ ನೀಡಲಾಗುತ್ತಿದೆ
ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದ್ದು, ಹಲವು ಫಲಾನುಭವಿಗಳ ಖಾತೆಗೆ 2,000 ರೂ. ಹಣ ವರ್ಗಾವಣೆ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಇನ್ನೂ 2 ತಿಂಗಳ ಹಣ ಬಂದಿಲ್ಲಾ ಎಂದು ಚಿಂತೆಗೀಡಾದವರು ತಪ್ಪದೇ ಈ ಕೆಲಸ ಮಾಡಿ.