ನಾಳೆಯಿಂದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : 2022-23ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ತುಮಕೂರು ನಲ್ಲಿ ದಿನಾಂಕ:27-10-2023 ರಿಂದ 29-10- 2023ರವರೆಗೆ (ಮೂರು ದಿನ) ನಡೆಸಲು ತೀರ್ಮಾನಿಸಲಾಗಿರುತ್ತದೆ. ಸದರಿ ಕ್ರೀಡಾಕೂಟವನ್ನು ಈ ಕೆಳಕಂಡಂತೆ ಆಯೋಜಿಸಲು ಸೂಚಿಸಿ ಸುತ್ತೋಲೆಯನ್ನು ಹೊರಡಿಸಿದೆ.

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ನಿಯಮಾವಳಿಗಳು:

  1. ಸದರಿಕ್ರೀಡಾಕೂಟದಲ್ಲಿರಾಜ್ಯ ಸರ್ಕಾರದ ಎಲ್ಲಾ ಖಾಯಂ ನೌಕರರು ಭಾಗವಹಿಸಲು
  2. ಯುವಸಬಲೀಕರಣಮತ್ತು ಕ್ರೀಡಾ ಇಲಾಖೆಯಲ್ಲಿನ ತರಬೇತುದಾರರು, ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಕರು. ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಕ್ರೀಡಾಕೋಟದಡಿ ನೇಮಕಗೊಂಡ ನೌಕರರು ಭಾಗವಹಿಸಲು ಅರ್ಹರಾಗಿರುವುದಿಲ್ಲ.
  3. ಎಲ್ಲಾಕ್ರೀಡಾಪಟುಗಳು ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕ್ರೀಡೆಯಲ್ಲಿ ಭಾಗವಹಿಸಲು ನೀಡಿರುವ ಅಧಿಕೃತ ಗುರುತಿನ ಚೀಟಿ ಕಡ್ಡಾಯವಾಗಿ ಸಲ್ಲಿಸತಕ್ಕದ್ದು.
  4. ಸಂಗೀತ, ನೃತ್ಯ ಮತ್ತು ಕಲಾ ಶಿಕ್ಷಕರು, ಸಂಗೀತ, ನೃತ್ಯ ಮತ್ತು ಕರಕುಶಲ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗಿರುವುದಿಲ್ಲ.
  5. ದಿನಗೂಲಿನೌಕರರು, ಅರೆಕಾಲಿಕನೌಕರರು, ಕ್ಷೇಮಾಭಿವೃದ್ಧಿ ನೌಕರರು, ಗುತ್ತಿಗೆ ನೌಕರರು, ನಿಗಮ/ಮಂಡಳಿ ನೌಕಕರು ಮತ್ತು ಇತರೇ ಖಾಯಂ ಅಲ್ಲದ ನೌಕರರು ಭಾಗವಹಿಸಲು ಅರ್ಹರಾಗಿರುವುದಿಲ್ಲ.
  6. ಅರಣ್ಯಇಲಾಖೆಗಳಲ್ಲಿ ಸಮವಸ್ತ್ರ, ವೃಂದಕ್ಕೆ ಪ್ರತ್ಯೇಕ ಕ್ರೀಡಾಕೂಟಗಳಿರುವುದರಿಂದ ಈ ಎರಡೂ ಇಲಾಖೆಗಳ ಕಛೇರಿ ಹಾಗೂ ಲಿಪಿಕ ನೌಕರರು/ಕಛೇರಿ ಸಿಬ್ಬಂದಿ ಮಾತ್ರ ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿದೆ.
  7. ಸರ್ಕಾರಿನೌಕರರ ಕ್ರೀಡಾಕೂಟದಲ್ಲಿ ಅಬಕಾರಿ, ಅರಣ್ಯ, ಅಗ್ನಿಶಾಮಕ ಇಲಾಖೆಗಳ ಕ್ರೀಡಾಕೋಟಾದಡಿ ಅವಕಾಶವಿರುವುದಿಲ್ಲ. ನೇಮಕವಾದ ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿರುವಿದಲ್ಲ.
  8. 1 ಟ್ರ್ಯಾಕ್ಮತ್ತು2 ಫೀಲ್ಡ್ ಅಥವಾ 2 ಟ್ರಾಕ್ ಮತ್ತು 1 ಫೀಲ್ಡ್ ಸೇರಿ. ಒಟ್ಟು ಮೂರು ಆಟಗಳಲ್ಲಿ ಮಾತ್ರ ಭಾಗವಹಿಸತಕ್ಕದ್ದು.
  9. 45 ವರ್ಷಮೇಲ್ಪಟ್ಟ ಸ್ಪರ್ಧಿಗಳು 45 ವರ್ಷಕ್ಕೊಳಪಟ್ಟವರಿಗೆ ಇರುವ ಸ್ಪರ್ಧೆಗಳಲ್ಲಿ ಸ್ವಂತ ಜವಾಬ್ದಾರಿ ಮೇಲೆ ಭಾಗವಹಿಸಬಹುದು. 45 ವರ್ಷಕ್ಕೊಳಪಟ್ಟವರು 45 ವರ್ಷ ಮೇಲ್ಪಟ್ಟವರ ಜೊತೆಯಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ.
  10. ತೀರ್ಪುಗಾರರ ತೀರ್ಮಾನವೇ ಅಂತಿಮ ತೀರ್ಮಾನ, ತಕರಾರಿಗೆ ಅವಕಾಶವಿರುವುದಿಲ್ಲ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read