ಬೆಂಗಳೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ಇದೀಗ ಬೆಂಗಳೂರಿಗೆ ಆಗಮಿಸಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಹಲವರು ಸ್ವಾಗತ ಕೋರಿದ್ದಾರೆ.
ದೆಹಲಿಯಿಂದ ಹೆಚ್ಎಎಲ್ ಏರ್ಪೋರ್ಟ್ ಗೆ ಬಂದಿಳಿದ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಸ್ವಾಗತ ಕೋರಲಾಗಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ, ಸಿ ಎಸ್ ವಂದಿತಾ ಶರ್ಮಾ ಮತ್ತಿತರರಿದ್ದರು. ಸಂಜೆ 4 ಗಂಟೆಗೆ ಬನ್ನೇರುಘಟ್ಟ ರಸ್ತೆಯಲ್ಲಿ ಐಐಎಂ ಸಂಸ್ಥಾಪನಾ ಉದ್ಘಾಟಿಸಲಿದ್ದು, 6.05ಕ್ಕೆ ಬೆಂಗಳೂರಿನಿಂದ ಚೆನ್ನೈಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸುವರ್ಣ ಮಹೋತ್ಸವದ ಅಂಗವಾಗಿ ರಾಷ್ಟ್ರಪತಿಗಳು ಗುರುವಾರ ಬೆಂಗಳೂರಿನಲ್ಲಿ ಸಂಸ್ಥಾಪನಾ ಸಪ್ತಾಹವನ್ನು ಉದ್ಘಾಟಿಸಲಿದ್ದಾರೆ. ಅವರು ಮಹಿಳಾ ಉದ್ಯಮಿಗಳು ಮತ್ತು ಅಧಿಕಾರಿಗಳೊಂದಿಗೆ ಸಂವಹನ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸುವರ್ಣ ಮಹೋತ್ಸವದ ಅಂಗವಾಗಿ ರಾಷ್ಟ್ರಪತಿಗಳು ಗುರುವಾರ ಬೆಂಗಳೂರಿನಲ್ಲಿ ಸಂಸ್ಥಾಪನಾ ಸಪ್ತಾಹವನ್ನು ಉದ್ಘಾಟಿಸಲಿದ್ದಾರೆ. ಅವರು ಮಹಿಳಾ ಉದ್ಯಮಿಗಳು ಮತ್ತು ಅಧಿಕಾರಿಗಳೊಂದಿಗೆ ಸಂವಹನ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.