ಬೆಂಗಳೂರು : ಬಾಯ್ಲರ್ ಸ್ಪೋಟಗೊಂಡು ಓರ್ವ ಕಾರ್ಮಿಕ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಮೃತರನ್ನು ಬೆಂಗಳೂರಿನ ದಾಸರಹಳ್ಳಿಯ ಚಿಗಮಲ್ಲಪ್ಪ ಅಲಿಯಾಸ್ ಮಂಜಪ್ಪ ಎಂದು ಗುರುತಿಸಲಾಗಿದೆ. ಮತ್ತೋರ್ವ ಕಾರ್ಮಿಕ ಮನೋಜ್ ಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ,
ಘಟನೆ ನಡೆದ ಸ್ಥಳಕ್ಕೆ ದಾಬಸ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.