HomeKarnatakaBIG NEWS: DYSP ಹುದ್ದೆಗಳು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಮೇಲ್ದರ್ಜೆಗೆ: ಸರ್ಕಾರ ಆದೇಶ

BIG NEWS: DYSP ಹುದ್ದೆಗಳು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಮೇಲ್ದರ್ಜೆಗೆ: ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ 30 ಡಿ.ವೈ.ಎಸ್.ಪಿ.ಗಳನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಮೇಲ್ದರ್ಜೆಗೇರಿಸಿ ಸರ್ಕಾರ ಆದೇಶಿಸಿದೆ.

6 ವಲಯಗಳ ಆಡಳಿತ ವಿಭಾಗ ಸೇರಿದಂತೆ ವಿವಿಧ ಪೊಲೀಸ್ ಘಟಕಗಳಲ್ಲಿರುವ 30 ಡಿ.ವೈ.ಎಸ್.ಪಿ. ಹುದ್ದೆಗಳನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸ್ಥಾನಕ್ಕೆ ಮೇಲ್ದರ್ಜೆಗೇರಿಸಲಾಗಿದೆ. 31 ಜಿಲ್ಲೆಗಳ ಪೈಕಿ 24 ಜಿಲ್ಲೆಗಳಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷರ ಹುದ್ದೆಗಳಿದ್ದು, ಇನ್ನುಳಿದ ಆರು ಜಿಲ್ಲೆಗಳಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಹುದ್ದೆ ಇರುವುದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲಾ ಪೊಲೀಸ್ ಅಧೀಕ್ಷಕರ ಕಾರ್ಯ ಒತ್ತಡ ತಗ್ಗಿಸುವ ಉದ್ದೇಶದಿಂದ ಮತ್ತು ಆಡಳಿತಾತ್ಮಕವಾಗಿ ನೆರವಾಗಲು ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಹುದ್ದೆಗಳನ್ನು ಸೃಜಿಸಲಾಗಿದೆ.

ಬೆಂಗಳೂರು ಗ್ರಾಮಾಂತರ, ತುಮಕೂರು, ಮೈಸೂರು, ಚಾಮರಾಜನಗರ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾವೇರಿ, ಬೆಳಗಾವಿ, ಚಿಕ್ಕಮಗಳೂರು, ದಾವಣಗೆರೆ, ವಿಜಯಪುರ, ಗದಗ, ಧಾರವಾಡ, ಬಳ್ಳಾರಿ, ಕಲಬುರಗಿ, ಬಾಗಲಕೋಟೆ, ವಿಜಯನಗರ, 6 ಐಜಿಪಿ ವಲಯ, ಸಿಐಡಿ, ಸಿಐಡಿ ಅರಣ್ಯ ಘಟಕಕ್ಕೆ ತಲಾ ಎರಡು ಹುದ್ದೆಗಳನ್ನು ಮೇಲ್ದರ್ಜೆಗೇರಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular