25ರಂದು ಶಾರದೋತ್ಸವ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಚಾಕು ಇರಿದು ಮೂವರಿಗೆ ಗಾಯಗಳಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೇಲ್ಕಾರ್ ಗ್ರಾಮದಲ್ಲಿ ನಡೆದಿದೆ.
ಅ.25ರಂದು ಶಾರದೋತ್ಸವ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು ಚಾಕು ಇರಿದು ಮೂವರಿಗೆ ಗಾಯಗಳಾಗಿವೆ. ಹುಲಿ ವೇಷ ಧರಿಸುವ ವಿಚಾರಕ್ಕೆ ಗುಂಪುಗಳ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ. . ಈ ವೇಳೆ ಮೂವರಿಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ.
ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು, ಬೋಳಂಗಡಿ ನಿವಾಸಿಗಳಾದ ದೇವದಾಸ್, ಸಂದೀಪ್, ಶಂಕರ್ಗೆ ಎಂಬುವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.