HomeKarnatakaBIG NEWS: ಬಿಡಿಎ ಎಂಜಿನಿಯರ್ ಗೆ ಜೀವ ಬೆದರಿಕೆ; FIR ದಾಖಲು

BIG NEWS: ಬಿಡಿಎ ಎಂಜಿನಿಯರ್ ಗೆ ಜೀವ ಬೆದರಿಕೆ; FIR ದಾಖಲು

ಬೆಂಗಳೂರು: ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ ನಿರ್ಮಾಣ ಮಾಡದಂತೆ ಬಿಡಿಎ ಎಂಜಿನಿಯರ್ ಅವರಿಗೆ ಬೆದರಿಕೆ ಹಾಕಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಾಗಿದೆ.

ಎ.ಎಂ.ಹನುಮಂತೇಗೌಡ ಎಂಬುವವರು ಬಿಡಿಎ ಎಂಜಿನಿಯರ್ ಗೆ ಜೀವ ಬೆದರಿಕೆ ಹಾಕಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ನಾಡಪ್ರಭು ಕೆಂಪೇಗೌಡ ಬಿಡಿಎ ಬಡಾವಣೆ ನಿರ್ಮಾಣ ಕಾಮಗಾರಿಯ ನಿರ್ವಹಣೆ ಮಾಡುತ್ತಿರುವ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅಶೋಕ್ ಹೆಚ್. ಭಾಗಿ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎರಡು ಮೂರು ಬಾರಿ ಹನುಮಂತೇಗೌಡ ಸ್ಥಳಕ್ಕಾಗಮಿಸಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಸ್ಥಗಿತಗೊಳಿಸಿದ್ದರು. ಪ್ರತಿ ದಿನ ಕಾಮಗಾರಿ ನಿಲ್ಲಿಸುವಂತೆ ಕರೆ ಮಾಡಿ ಧಮ್ಕಿ ಹಾಕುತ್ತಿದ್ದಾರೆ. ಅಲ್ಲದೇ ಅ.25ರಂದು ಎಂಜಿನಿಯರ್ ಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಹನುಮಂತೇಗೌಡ ವಿರುದ್ಧ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular