HomeKarnatakaBIG NEWS: 5000 ಸಂಗೀತ, ದೈಹಿಕ ಶಿಕ್ಷಕರು ಸೇರಿ 20,000 ಶಿಕ್ಷಕರ ನೇಮಕಾತಿ

BIG NEWS: 5000 ಸಂಗೀತ, ದೈಹಿಕ ಶಿಕ್ಷಕರು ಸೇರಿ 20,000 ಶಿಕ್ಷಕರ ನೇಮಕಾತಿ

ಶಿವಮೊಗ್ಗ: 5000 ಸಂಗೀತ, ದೈಹಿಕ ಶಿಕ್ಷಕರು ಸೇರಿದಂತೆ 20,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವರ್ಷದಲ್ಲಿ 20 ಸಾವಿರ ಶಿಕ್ಷಕರ ನೇಮಕಾತಿ ನಡೆಯಲಿದೆ. ಈ 20,000 ಶಿಕ್ಷಕರಲ್ಲಿ 15,000 ನಿಯಮಿತ ಶಿಕ್ಷಕರು, 5 ಸಾವಿರ ಸಂಗೀತ, ದೈಹಿಕ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 9 ಸಾವಿರ ಶಿಕ್ಷಕರ ನೇಮಕ ಮಾಡಿಕೊಂಡಿದ್ದು, ಇನ್ನೂ 4 ಸಾವಿರ ಶಿಕ್ಷಕರ ನೇಮಕಾತಿ ಆಗಬೇಕಿದೆ. ಕೆಲವರು ನೇಮಕಾತಿಗೆ ಸಂಬಂಧಿಸಿದಂತೆ ಕೋರ್ಟ್ ಗೆ ಹೋಗಿರುವುದರಿಂದ ಅಕ್ಟೋಬರ್ 30 ರಂದು ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ. ಕೋರ್ಟ್ ನಲ್ಲಿ ಪ್ರಕರಣ ಇತ್ಯರ್ಥವಾದರೆ 4000 ಶಿಕ್ಷಕರ ನೇಮಕ ಆಗಲಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular