ಬೆಂಗಳೂರು : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಕಾವೇರಿ ನೀರು ನಿಯಂತ್ರಣ ಸಮಿತಿಯ ಮಹತ್ವದ ಸಭೆ ನಿಗದಿಯಾಗಿದೆ.
ಸೋಮವಾರ ಮಧ್ಯಾಹ್ನ 2 ಗಂಟೆಗೆ ಸಭೆ ನಡೆಯಲಿದ್ದು ಮುಂದಿನ ಅವಧಿಗೆ ನೀರು ಹರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲು ಸಮಿತಿ ಮುಂದಾಗಿದೆ.
ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಮಹತ್ವದ ಸಭೆ ನಡೆಸಿದ ಸಮಿತಿಯು ತಮಿಳುನಾಡಿಗೆ 15 ದಿನಗಳ ಕಾಲ ಅಂದ್ರೆ ಅಕ್ಟೋಬರ್ 16ರಿಂದ 31ರ ವರೆಗೆ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಿತ್ತು. CWRA ಆದೇಶ ಪಾಲಿಸುವಂತೆ CWMA ಸೂಚನೆ ನೀಡಿತ್ತು.
ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ?
ರಾಜ್ಯದ 216 ತಾಲೂಕುಗಳು ಭೀಕರ ಬರದಿಂದ ಕಂಗೆಟ್ಟಿವೆ, ಈ ವರೆಗೆ ಕೇಂದ್ರದಿಂದ ನಯಾಪೈಸೆ ಪರಿಹಾರದ ಹಣ ಬಿಡುಗಡೆಯಾಗಿಲ್ಲ. ಪ್ರಧಾನಿ ಮೋದಿ ಅವರೇ, ಜಗತ್ತಿನ ಕಷ್ಟ – ದು:ಖಕ್ಕೆಲ್ಲ ಮಿಡಿಯುವ ನಿಮ್ಮ ‘ವಿಶಾಲ ಹೃದಯ ಕನ್ನಡಿಗರ ಬಗ್ಗೆ ಇಷ್ಟೊಂದು ಕಟುವಾಗಿರುವುದು ಯಾಕೆ? ನಿಮ್ಮ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ ಜನರ ಪ್ರಶ್ನೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.