HomeKarnatakaBIG NEWS: ಬಿಜೆಪಿಯಿಂದ ದೊಡ್ದ ಷಡ್ಯಂತ್ರ ನಡೆದಿದೆ; ಆದ್ರೆ ಏನೂ ಪ್ರಯೋಜನವಿಲ್ಲ ಎಂದ ಡಿಸಿಎಂ

BIG NEWS: ಬಿಜೆಪಿಯಿಂದ ದೊಡ್ದ ಷಡ್ಯಂತ್ರ ನಡೆದಿದೆ; ಆದ್ರೆ ಏನೂ ಪ್ರಯೋಜನವಿಲ್ಲ ಎಂದ ಡಿಸಿಎಂ

ಬೆಂಗಳೂರು: ವಿಪಕ್ಷ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ದೊಡ್ಡ ಷಡ್ಯಂತ್ರ ನಡೆಸುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಹೈದರಾಬಾದ್ ಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸರ್ಕಾರ ಬೀಳಿಸಲು ಬಿಜೆಪಿ ಷಡ್ಯಂತ್ರ ರೂಪಿಸುತ್ತಿದ್ದು, ಅದು ಫಲಿಸುವುದಿಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿಯವರು ಆಮಿಷವೊಡ್ಡುತ್ತಿದ್ದಾರೆ ಎಂಬ ಮಂಡ್ಯ ಶಾಸಕ ರವಿ ಗಣಿಗಾ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಸಿಎಂ, ಈ ಷಡ್ಯಂತ್ರದ ಬಗ್ಗೆ ನಮಗೆ ಗೊತ್ತಿದೆ. ಇದರ ಹಿಂದೆ ದೊಡ್ಡ, ದೊಡ್ಡ ನಾಯಕರು ಇದ್ದಾರೆ. ಆದರೆ ಯಾವುದೇ ಪ್ರಯೋಜನವಾಗಲ್ಲ ಎಂದರು.

ಇದೇ ವೇಳೆ ಪಕ್ಷದ ಶಾಸಕರು ಪಕ್ಷದ ಆಂತರಿಕ ವಿಚಾರ, ಸರ್ಕಾರ ಹಾಗೂ ಅಧಿಕಾರದ ಬಗ್ಗೆ ಯಾವುದೇ ಹೇಳಿಕೆಗಳನ್ನು ಕೊಡುವಂತಿಲ್ಲ. ಅನಗತ್ಯವಾಗಿ ಹೇಳಿಕೆಗಳನ್ನು ಕೊಟ್ಟರೆ ಅವರಿಗೆ ನೋಟಿಸ್ ನೀಡಲಾಗುತ್ತದೆ ಎಂದು ಎಚ್ಚರಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular