ಬೆಂಗಳೂರು : ‘PSI’ ನೇಮಕಾತಿ ಹಗರಣದ ಬೆನ್ನಲ್ಲೇ ‘KPSC’ ಪರೀಕ್ಷೆಯಲ್ಲೂ ಅಕ್ರಮ ನಡೆದಿದ್ದು, ಒಟ್ಟಾರೆ 8 ಮಂದಿಯನ್ನು ಬಂಧಿಸಲಾಗಿದೆ.
ಕೆಪಿಎಸ್ಸಿಯ ಪರೀಕ್ಷೆ ಬರೆಯುತ್ತಿದ್ದ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.ಯಾದಗಿರಿ ಎಸ್ ಪಿ ಸಂಗೀತಾ ನೇತೃತ್ವದಲ್ಲಿ ಇಂದು ಕಾರ್ಯಾಚರಣೆ ನಡೆದಿದ್ದು, ಕೆಪಿಎಸ್ಸಿ ಪರೀಕ್ಷಾ ಅಕ್ರಮದಲ್ಲಿ ತೊಡಗಿದ್ದಂತ ಅಭ್ಯರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ. ಯಾದಗಿರಿ ಜಿಲ್ಲೆಯ ಒಟ್ಟು 17 ಕೇಂದ್ರಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆ ನಡೆಸುತ್ತಿದ್ದು, ಅಕ್ರಮ ಎಸಗಿದ ಆರೋಪದಲ್ಲಿ ಈಗ 8 ಮಂದಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಬ್ಲೂಟೂತ್ ಬಳಸಿ ಪರೀಕ್ಷೆ
ಬ್ಲೂಟೂತ್ ಬಳಸಿ ಕೆಪಿಎಸ್ಸಿ (KPSC) ಪರೀಕ್ಷೆ ಬರೆಯುತ್ತಿದ್ದ ನಕಲಿ ಅಭ್ಯರ್ಥಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಫಜಲಪುರದ ಸೊನ್ನಾ ಗ್ರಾಮದ ಪುಟ್ಟು ಎಂಬಾತ ಬ್ಲೂಟೂತ್ ಬಳಸಿಕೊಂಡು ಪರೀಕ್ಷೆ ಬರೆಯುತ್ತಿದ್ದನು. ಈ ವೇಳೆ ವಿಚಾರಣೆ ನಡೆಸಿದಾಗ ಈತ ನಕಲಿ ಅಭ್ಯರ್ಥಿ ಎಂದು ತಿಳಿದು ಬಂದಿದೆ. ಈ ಸಂಬಂಧ ಈತನಿಗೆ ಸಹಕರಿಸಿದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.