ಮೈಸೂರು: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರಿಗೆ ಬೆದರಿಕೆ ಕರೆ ಬರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಯೋಗ ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರಿಗೆ ದೂರು ನೀಡಿದೆ.
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಮಾತನಾಡಿದ್ದಕ್ಕೆ ಬೆದರಿಕೆ ಕರೆ ಬರುತ್ತಿದೆ. ಜೆಡಿಎಸ್ ಕಾರ್ಯಕರ್ತರು ಕರೆ ಮಾಡಿ ಬೆದರಿಕೆಯೊಡ್ಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಇತ್ತೀಚೆಗೆ ಎಂ.ಲಕ್ಷ್ಮಣ್ ಅವರು ಸುದ್ದಿಗೋಷ್ಠಿ ನಡೆಸಿದ್ದರು. ಆ ಬಳಿಕ ಜೆಡಿಎಸ್ ಕಾರ್ಯಕರ್ತರು ಬೆದರಿಕೆ ಹಾಕುತ್ತಿದ್ದಾರೆ. ಬೆದರಿಕೆ ಕರೆ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಮಿಷನರ್ ಗೆ ಕಾಂಗ್ರೆಸ್ ನಿಯೋಗ ಮನವಿ ಮಾಡಿದೆ.