ಕಲಬುರಗಿ: PSI ನೇಮಕಾತಿ ಹಗರಣದ ಕಿಂಗ್ ಪಿನ್ ರುದ್ರಗೌಡ ಪಾಟೀಲ್ KEA ಪರೀಕ್ಷೆಯಲ್ಲೂ ಅಕ್ರಮ ನಡೆಸಿದ ಆರೋಪ ಕೇಳಿಬಂದಿದ್ದು, ಪ್ರಕರಣ ದಾಖಲಿಸಲಾಗಿದೆ.
ಅಶೋಕ ನಗರ ಠಾಣೆಯಲ್ಲಿ ರುದ್ರಗೌಡ ಪಾಟೀಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಕೆಇಎ ಪರೀಕ್ಷೆಯಲ್ಲಿ ನಕಲು ಮಾಡುವಾಗ ತ್ರಿಮೂರ್ತಿ ಸಿಕ್ಕಿ ಬಿದ್ದಿದ್ದ. ತ್ರಿಮೂರ್ತಿ ಹೇಳಿಕೆ ಆಧರಿಸಿ ಪಿಎಸ್ಐ ನೇಮಕಾತಿ ಹಗರಣದ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ತ್ರಿಮೂರ್ತಿ, ಸಹೋದರ ಅಂಬರೀಶ, ರುದ್ರಗೌಡ ಪಾಟೀಲನ ವಿರುದ್ಧ ಕೇಸ್ ದಾಖಲಿಸಲಾಗಿದೆ. ಕಾರ್ ನಲ್ಲಿ ಕುಳಿತು ಬ್ಲೂಟೂತ್ ಮೂಲಕ ಆರೋಪಿಗಳು ಉತ್ತರ ಹೇಳುತ್ತಿದ್ದರು. ನಕಲು ಮಾಡಲು ಸಹಾಯ ಮಾಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 420, 120ಬಿ, ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.