HomeKarnatakaBIG NEWS: 5 ವರ್ಷ ಸರ್ಕಾರ ಇರುತ್ತೆ: ಯಾವಾಗ ಬೇಕಾದ್ರೂ ಸಂಪುಟ ವಿಸ್ತರಣೆ ಆಗಬಹುದು: ಸಚಿವ...

BIG NEWS: 5 ವರ್ಷ ಸರ್ಕಾರ ಇರುತ್ತೆ: ಯಾವಾಗ ಬೇಕಾದ್ರೂ ಸಂಪುಟ ವಿಸ್ತರಣೆ ಆಗಬಹುದು: ಸಚಿವ ದಿನೇಶ್ ಗುಂಡೂರಾವ್

ಬೀದರ್: ದಲಿತ ಸಿಎಂ ಬಗ್ಗೆ ಚರ್ಚೆ ನಡೆಯುತ್ತಿರುವುದು ತಪ್ಪಲ್ಲ. ಚರ್ಚೆ ನಡೆದರೆ ತಪ್ಪೇನು? ದಲಿತ ಮುಖ್ಯಮಂತ್ರಿ ಆಗುವ ಸಮಯ, ಸಂದರ್ಭ ಬರಬೇಕಾಗುತ್ತದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೀದರ್ ನಲ್ಲಿ ಮಾತನಾಡಿದ ಅವರು, ದಲಿತ ಸಮುದಾಯದ ನಾಯಕರು ಒಟ್ಟಾಗಿ ಸೇರುವುದರಲ್ಲಿ ತಪ್ಪೇನಿದೆ? ಸಮುದಾಯದ ಅಭಿವೃದ್ಧಿ ಬಗ್ಗೆ ನಾಯಕರು ಒಂದೆಡೆ ಸೇರಿ ಚರ್ಚಿಸುತ್ತಾರೆ.ಐದು ವರ್ಷ ನಮ್ಮ ಸರ್ಕಾರ ಇರುತ್ತೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುತ್ತಾರೆ. ಯಾವಾಗ ಬೇಕಾದರೂ ಸಚಿವ ಸಂಪುಟ ಪುನಾರಚನೆ ಆಗಬಹುದು. ಸಚಿವ ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಚಾರವಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿರೋಧ ಪಕ್ಷದವರು ಒಳ್ಳೆಯ ಸಲಹೆ, ಟೀಕೆ ಮಾಡಿದ್ದರೆ ಒಪ್ಪಿಕೊಳ್ಳಬಹುದು. ಬಾಯಿಗೆ ಬಂದಂತೆ ಮಾತನಾಡಿದರೆ ಅದಕ್ಕೆ ಉತ್ತರಿಸುವುದಿಲ್ಲ. ವಿರೋಧಪಕ್ಷದವರು ಪ್ರಚಾರಕ್ಕಾಗಿ ಏನೇನೋ ಮಾತನಾಡುತ್ತಿದ್ದಾರೆ ಎಂದು ದೂರಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular