alex Certify ವಿಮಾನ ನಿಲ್ದಾಣದಲ್ಲಿ ಅನುಚಿತವಾಗಿ ಮುಟ್ಟಿ ಮಹಿಳೆಗೆ ಕಿರುಕುಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಮಾನ ನಿಲ್ದಾಣದಲ್ಲಿ ಅನುಚಿತವಾಗಿ ಮುಟ್ಟಿ ಮಹಿಳೆಗೆ ಕಿರುಕುಳ

ಲೋಹೆಗಾಂವ್‌ ನ ಪುಣೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಏರ್‌ ಲೈನ್‌ ವಿಮಾನವನ್ನು ಪ್ರವೇಶಿಸುತ್ತಿದ್ದಾಗ 27 ವರ್ಷದ ಮಹಿಳೆಯೊಬ್ಬರಿಗೆ ಪ್ರಯಾಣಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಶುಕ್ರವಾರ ವಿಮಂತಲ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು ನೀಡಿದ ನಂತರ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಸಂತ್ರಸ್ತೆ ಅಕ್ಟೋಬರ್ 21 ರಂದು ಸಂಜೆ ಪುಣೆಯಿಂದ ಬೆಂಗಳೂರಿಗೆ ವಿಮಾನ ಹತ್ತುವಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆ ವಿಮಾನವನ್ನು ಪ್ರವೇಶಿಸಲು ಸುರಂಗದಲ್ಲಿ ಸರತಿ ಸಾಲಿನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಆಕೆಯ ಹಿಂದೆ ನಿಂತಿದ್ದ ಪ್ರಯಾಣಿಕರೊಬ್ಬರು ಅವಳನ್ನು ಅನುಚಿತವಾಗಿ ಹಿಂದಿನಿಂದ ಮುಟ್ಟಿ ಕಿರುಕುಳ ನೀಡಿದ್ದಾಗಿ ಆರೋಪಿಸಿದ್ದಾರೆ. ಘಟನೆ ಬಗ್ಗೆ ಮಹಿಳೆ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ವಿಮಂತಲ್ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಇನ್ಸ್‌ ಪೆಕ್ಟರ್ ಸಾಹೇಬ ಪೋಟೆ, ಸಂತ್ರಸ್ತ ಮಹಿಳೆ ಶುಕ್ರವಾರ ಪೊಲೀಸರನ್ನು ಸಂಪರ್ಕಿಸಿದ್ದು, ಎಫ್‌ಐಆರ್ ದಾಖಲಿಸಲಾಗಿದೆ. ತನಿಖೆಯನ್ನು ಪ್ರಾರಂಭಿಸಲಾಗಿದೆ. ಆರೋಪಿಯನ್ನು ಗುರುತಿಸಲಾಗಿದೆ. ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 354 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...