ನವದೆಹಲಿ: ಜನವರಿ 22ರಂದು ಅಯೋಧ್ಯ ಶ್ರೀ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಅಂದು ಮಧ್ಯಾಹ್ನ 12:45ಕ್ಕೆ ರಾಮಲಲ್ಲಾ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನೆರವೇರಲಿದೆ.
ಜನವರಿ 23ರಂದು ಮುಂಜಾನೆ 1 ಗಂಟೆವರೆಗೂ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದ್ದು, ಪ್ರಧಾನಿ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗವತ್ ಸೇರಿ ಹಲವರು ಭಾಗವಹಿಸಲಿದ್ದಾರೆ.
ಜನವರಿ 16 ರಿಂದಲೇ ರಾಮಮಂದಿರದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ವಾರಣಾಸಿಯ ವೇದಜ್ಞ ಲಕ್ಷ್ಮಿಕಾಂತ್ ದೀಕ್ಷಿತ್ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನೆರವೇರಲಿವೆ. ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಬರುವ ಎಲ್ಲರಿಗೂ ಆಧಾರ್ ಕಡ್ಡಾಯಗೊಳಿಸಲಾಗಿದೆ.
ದೇಶದ ವಿವಿಧೆಡೆಯ 400 ಸಾಧು, ಸಂತರು, 2,500ಕ್ಕೂ ಹೆಚ್ಚು ಗಣ್ಯರಿಗೆ ಆಹ್ವಾನ ನೀಡಲಾಗಿದೆ.ಎಂದು ಕಾರ್ಯಕ್ರಮದ ಬಗ್ಗೆ ರಾಮ ಜನ್ಮಭೂಮಿ ಟ್ರಸ್ಟ್ ಮಾಹಿತಿ ನೀಡಿದೆ.