ಬೆಂಗಳೂರು: ಅನಗತ್ಯ ಹೇಳಿಕೆ ನೀಡಿದರೆ ನೋಟಿಸ್ ನೀಡಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಆಂತರಿಕ ವಿಚಾರದ ಬಗ್ಗೆ, ಸರ್ಕಾರ ಮತ್ತು ಆಡಳಿತ ಅಧಿಕಾರದ ಬಗ್ಗೆ ಮಾಧ್ಯಮಗಳ ಮುಂದೆ ಅನಗತ್ಯ ಹೇಳಿಕೆ ನೀಡಬಾರದು. ಸೂಚನೆಯ ನಂತರವೂ ಹೇಳಿಕೆ ನೀಡಿದಲ್ಲಿ ಅಂತಹವರಿಗೆ ನೋಟಿಸ್ ನೀಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಸರ್ಕಾರ ಬೀಳಿಸಲು ಬಿಜೆಪಿ ಷಡ್ಯಂತ್ರ ಮಾಡುತ್ತಿರುವುದು ನಮಗೆ ಗೊತ್ತಿದೆ. ದೊಡ್ಡ ದೊಡ್ಡ ನಾಯಕರು ಇದರ ಹಿಂದೆ ಇದ್ದಾರೆ. ಆದರೆ, ಬಿಜೆಪಿ ಷಡ್ಯಂತ್ರ ಫಲಿಸುವುದಿಲ್ಲ ಎಂದು ಹೇಳಿದ್ದಾರೆ.