HomeKarnatakaಅಸಂಘಟಿತ ಕಾರ್ಮಿಕರಿಗೆ ಗುಡ್ ನ್ಯೂಸ್ : ಶೀಘ್ರವೇ `ಕನಿಷ್ಟ ವೇತನ’ ನಿಗದಿ

ಅಸಂಘಟಿತ ಕಾರ್ಮಿಕರಿಗೆ ಗುಡ್ ನ್ಯೂಸ್ : ಶೀಘ್ರವೇ `ಕನಿಷ್ಟ ವೇತನ’ ನಿಗದಿ

ಹುಬ್ಬಳ್ಳಿ : ಅಸಂಘಟಿತ ಕಾರ್ಮಿಕರಿಗೆ ಸಚಿವ ಸಂತೋಷ್ ಲಾಡ್ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಕನಿಷ್ಟ ವೇತನ ನಿಗದಿಪಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಕಟ್ಟಡ ಕಾರ್ಮಿಕರ ಸಮಾವೇಶದಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ಅಸಂಘಟಿತ ಕಾರ್ಮಿಕರು ಸೇರಿ ಎಲ್ಲ ವರ್ಗದ ಕೆಲಸಗಾರರಿಗೆ ಕನಿಷ್ಟ ವೇತನ ನಿಗದಿ ಮಾಡಲು ಶೀಘ್ರವೇ ಕಾನೂನು ಜಾರಿಗೆ ತರಲಾಗುವುದು. ರಾಜ್ಯದಲ್ಲಿ ಶೇ. 85 ರಷ್ಟು ಕಾರ್ಮಿಕರು ಅಸಂಘಟಿತ ವಲಯದಲ್ಲಿ ಇದ್ದಾರೆ. ಅವರೆಲ್ಲರನ್ನೂ ಕಾರ್ಮಿಕ ಕಲ್ಯಾಣ ಮಂಡಳಿ ಅಡಿ ತಂದು ಸೌಲಭ್ಯ ಕೊಡಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ 180 ಕೋಟಿ ಅಸಂಘಟಿತ ಕಾರ್ಮಿಕರ ಪೈಕಿ 45 ಲಕ್ಷ ಕಾರ್ಮಿಕರಿಗೆ ಕಾರ್ಮಿಕರ ಕಾರ್ಡ್ ವಿತರಣೆ ಮಾಡಲಾಗಿದೆ. 10 ಲಕ್ಷ ಅರ್ಜಿಗಳು  ಪೆಂಡಿಂಗ್ ಇದ್ದು, ಎಲ್ಲವನ್ನೂ ಪರಿಶೀಲನೆ ಮಾಡಿ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular