HomeKarnatakaBIG NEWS: ಕಾಂಗ್ರೆಸ್ ನ ಗೊಂದಲದಿಂದ ರಾಜ್ಯದ ಜನರು ಅತಂತ್ರ; ಭಿನ್ನಮತ ಡೈವರ್ಟ್ ಮಾಡಲು ಪೆಂಡೆಂಟ್...

BIG NEWS: ಕಾಂಗ್ರೆಸ್ ನ ಗೊಂದಲದಿಂದ ರಾಜ್ಯದ ಜನರು ಅತಂತ್ರ; ಭಿನ್ನಮತ ಡೈವರ್ಟ್ ಮಾಡಲು ಪೆಂಡೆಂಟ್ ವಿಚಾರ ಪ್ರಸ್ತಾಪ; ಪ್ರಹ್ಲಾದ್ ಜೋಶಿ ಆಕ್ರೋಶ

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಗೊಂದಲಗಳಿಂದಾಗಿ ಜನರು ಅತಂತ್ರ ಸ್ಥಿತಿಯಲ್ಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸವನ್ನೂ ಮಾಡುತ್ತಿಲ್ಲ. ಡಿಸಿಎಂ ಬಿಟ್ಟು ಸಭೆ ಮಾಡುವ ದುಸ್ಥಿತಿಗೆ ಕಾಂಗ್ರೆಸ್ ತಲುಪಿದೆ. ಗ್ಯಾರಂಟಿಗಳಿಗೆ ಕಂಡಿಷನ್ ಹಾಕಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೈತರ ಜಮೀನುಗಳಿಗೆ ಸೂಕ್ತವಾದ ವಿದ್ಯುತ್ ಸರಬರಾಜು ಆಗುತ್ತಿಲ್ಲ, ಬರದ ನಡುವೆ ವಿದ್ಯುತ್ ಸಮಸ್ಯೆಯಿಂದಾಗಿ ರೈತರು ಕಂಗಾಲಾಗಿದ್ದಾರೆ. ಕಾಂಗ್ರೆಸ್ ನಲ್ಲಿ ನಿತ್ಯವೂ ಭಿನ್ನಮತ ಜೋರಾಗುತ್ತಿದೆ. ಇದನ್ನು ಡೈವರ್ಟ್ ಮಾಡಲು ಹುಲಿ ಉಗುರಿನ ಪೆಂಡೆಂಟ್ ವಿಚಾರ ಶುರು ಮಾಡಿದರು ಎಂದು ವಾಗ್ದಾಳಿ ನಡೆಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular