ನವದೆಹಲಿ: ಕೇರಳದ ಎರ್ನಾಕುಲಂ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಭವಿಸಿದ ಸರಣಿ ಸ್ಫೋಟ ಪ್ರಕರಣದಲ್ಲಿ ಉಗ್ರರ ಕೈವಾಡ ಶಂಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶಾದ್ಯಂತ ಹೈ ಅಲರ್ಟ್ ಘೋಷಿಸಿದೆ.
ಎರ್ನಾಕುಲಂ ಕನ್ವೆನ್ಷನ್ ಹಾಲ್ ನಲ್ಲಿ ಸಂಭವಿಸಿದ ಸರಣಿ ಸ್ಫೊಟದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕೆಲವರ ಸ್ಥಿತಿ ಗಂಭೀರವಾಗಿದೆ. 2000ಕ್ಕೂ ಹೆಚ್ಚು ಜನರು ಪ್ರಾರ್ಥನೆಗಾಗಿ ಸೇರಿದ್ದ ಸಂದರ್ಭದಲ್ಲಿ ಈ ಸ್ಫೋಟ ಸಂಭವಿಸಿದ್ದು, ಭಯೋತ್ಪಾದಕ ಕೃತ್ಯವಿರುವ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜನನಿಬಿಡ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.
ದೆಹಲಿಯ ಎಲ್ಲಾ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಮಹಾರಾಷ್ಟ್ರ, ಗೋವಾ ಗಡಿ ಪ್ರದೇಶಗಳಲ್ಲಿಯೂ ಖಾಕಿ ಅಲರ್ಟ್ ಆಗಿದೆ. ಆಯಾ ರಾಜ್ಯಗಳ ಗಡಿ ಪ್ರದೇಶಗಳಲ್ಲಿ, ಜನನಿಬಿಡ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ವಹಿಸಲು ಸೂಚಿಸಲಾಗಿದೆ.