ಬೆಂಗಳೂರು : ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳು ಶಾಕ್ ನೀಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ಹಲವಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಹಾಸನದಲ್ಲೂ ಲೋಕಾಯುಕ್ತ ದಾಳಿ ನಡೆದಿದ್ದು, ಕೆಪಿಟಿಸಿಎಲ್ ಜೂನಿಯರ್ ಇಂಜಿನಿಯರ್ ಹೆಚ್. ಇ. ನಾರಾಯಣ್ ಮನೆ, ಹಾಸನ ಹೊರವಲಯದಲ್ಲಿರುವ ಮನೆ, ಕಚೇರಿಗಳ ಮೇಲೆ ದಾಳಿ ಮಾಡಲಾಗಿದ್ದು, ಲೋಕಾಯುಕ್ತ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.
ಚಿತ್ರದುರ್ಗದಲ್ಲೂ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ಉದ, ಹಿರಿಯೂರು ಪಟ್ಟಣದಲ್ಲಿ ಅರಣ್ಯ ಇಲಾಕೆಯ ನಾಗೇಂದ್ರ ನಾಯಕ್ ಮನೆ ಮೇಲೆ ದಾಳಿ ನಡೆಸಿದ್ದಾರೆ. ಹಿರಿಯೂರು ಪಟ್ಟಣದ ಚಂದ್ರಾಲೇಔಟ್, ತವಂದಿ ಗ್ರಾಮದ ಬಳಿಯ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಚಿತ್ರದುರ್ಗದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ಮನೆಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಿರಿಯೂರು ಪಟ್ಟಣದ ಕುವೆಂಪು ನಗರದ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ.
ಹಾವೇರಿ ಜಿಲ್ಲೆಯ ಹಲವಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಹಾವೇರಿ ಆರ್ ಎಫ್ ಒ ಪರಮೇಶಪ್ಪ ಅವರಿಗೆ ಸೇರಿದ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.