ಉಡುಪಿ : ರಾಜ್ಯದ ಹಲವು ಕಡೆ ನಿನ್ನೆ ಗುಡುಗು ಸಿಡಲಿನ ಆರ್ಭಟ ಜೋರಾಗಿದ್ದು, ಉಡುಪಿಯಲ್ಲಿ ಸಿಡಿಲು ಬಡಿದು ಯುವಕ ಸಾವನ್ನಪ್ಪಿದ್ದಾನೆ.
ಮೃತನನ್ನು ಬ್ರಹ್ಮಾವರ ತಾಲೂಕಿನ ಮಂದಾರ್ತಿ ಆವರ್ಸೆಯ ಪ್ರಮೋದ್ ಶೆಟ್ಟಿ ಎಂದು ಗುರುತಿಸಲಾಗಿದೆ. ಭಾರಿ ಮಳೆ ಹಿನ್ನೆಲೆ ಈತ ಮರದಡಿ ನಿಂತಿದ್ದನು. ಈ ವೇಳೆ ಪ್ರಮೋದ್ ಗೆ ಸಿಡಿಲು ಬಡಿದಿದೆ. ಗಂಭೀರವಾಗಿ ಗಾಯಗೊಂಡಿದ್ದ ಪ್ರಮೋದ್ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ .
ರಾಜ್ಯದ ಹಲವು ಕಡೆ ನಿನ್ನೆ ಭಾರಿ ಮಳೆಯಾಗಿದ್ದು, ಗುಡುಗು ಸಿಡಿಲಿನ ಆರ್ಭಟ ಕೂಡ ಜೋರಾಗಿತ್ತು. ಸಂಜೆ ವೇಳೆಗೆ ಚಿಕ್ಕಮಗಳೂರು, ಉಡುಪಿ ಸೇರಿದಂತೆ ಹಲವು ಕಡೆ ಮಳೆಯಾಗಿದೆ.