HomeKarnatakaBIG NEWS: ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ; ಒಬ್ಬೊಬ್ಬರೇ ಓಡಾಡದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಅನೌನ್ಸ್

BIG NEWS: ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ; ಒಬ್ಬೊಬ್ಬರೇ ಓಡಾಡದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಅನೌನ್ಸ್

ಬೆಂಗಳೂರು: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕವನ್ನುಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಒಬ್ಬೊಬ್ಬರೇ ಓಡಾಡದಂತೆ ಸೂಚಿಸಿದ್ದಾರೆ.

ಬೆಂಗಳೂರಿನ ಬೊಮ್ಮನಹಳ್ಳಿಯ ಕೂಡ್ಲು ಸಿಂಗಸಂದ್ರ ಬಳಿ ಬಡಾವಣೆಗಳ ರಸ್ತೆಯಲ್ಲಿ ಚಿರತೆ ಓಡಾಡುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರಿಂದಾಗಿ ಬೊಮ್ಮನಹಳ್ಳಿ, ಬಿಟಿಎಂ ಲೇಔಟ್, ಹೆಚ್.ಎಸ್.ಆರ್ ಲೇಔಟ್ ಸೇರಿದಂತೆ ಸುತಮುತ್ತಲ ಜನರು ಆತಂಕಗೊಂಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಚಿರತೆ ಸೆರೆ ಹಿಡಿಯುವಂತೆ ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆ.ಆರ್.ಪುರಂ ವಲಯ ಅರಣ್ಯ ಅಧಿಕಾರಿಗಳು ಚಿರತೆ ಸೆರೆಹಿಡಿಯಲು ಶೋಧಕಾರ್ಯಾಚರಣೆ ನಡೆಸಿದ್ದಾರೆ. ಈ ನಡುವೆ ಅರಣ್ಯ ಇಲಾಖೆ ಅಧಿಕಾರಿಗಳು ಬೊಮ್ಮನಹಳ್ಳಿ, ಹೆಚ್.ಎಸ್.ಆರ್.ಲೇಔಟ್, ಬಿಟಿಎಂ ಲೇಔಟ್ ಗಳಲ್ಲಿ ರಾತ್ರಿ ವೇಳೆ ಒಬ್ಬೊಬ್ಬರೇ ಓಡಾಡದಂತೆ ಹಾಗೂ ಅನಿವಾರ್ಯವಿದ್ದರೆ ಕಾರಿನಲ್ಲಿ ಓಡಾಡುವಂತೆ ಮೈಕ್ ಗಳಲ್ಲಿ ಅನೌನ್ಸ್ ಮಾಡಿ ಎಚ್ಚರಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular