HomeIndiaಪಾಲಿಕೆ ಅಧಿಕಾರಿಗಳ ಮೇಲೆ ಹಲ್ಲೆ: ಬಿಜೆಪಿ ಶಾಸಕನಿಗೆ ಆರು ತಿಂಗಳು ಜೈಲು ಶಿಕ್ಷೆ

ಪಾಲಿಕೆ ಅಧಿಕಾರಿಗಳ ಮೇಲೆ ಹಲ್ಲೆ: ಬಿಜೆಪಿ ಶಾಸಕನಿಗೆ ಆರು ತಿಂಗಳು ಜೈಲು ಶಿಕ್ಷೆ

2017ರಲ್ಲಿ ಬಿಎಂಸಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಆರೋಪವು ಸಾಬೀತಾದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ತಮಿಳ್​ ಸೆಲ್ವನ್​ ಹಾಗೂ ಇತರೆ ನಾಲ್ವರಿಗೆ ಆರು ತಿಂಗಳ ಜೈಲು ಶಿಕ್ಷೆ ಹಾಗೂ ತಲಾ 13,500 ರೂಪಾಯಿ ದಂಡವನ್ನು ವಿಧಿಸಿ ವಿಶೇಷ ನ್ಯಾಯಾಲಯ ಆದೇಶವನ್ನು ಹೊರಡಿಸಿದೆ.

ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಆರ್​.ಎನ್.​​ ರೋಕಡೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್​ಗಳ ಅಡಿಯಲ್ಲಿ ಗಲಭೆ, ಕಾನೂನುಬಾಹಿರ ಸಭೆ, ಕರ್ತವ್ಯ ನಿರತ ಸಾರ್ವಜನಿಕ ನೌಕರಿಗೆ ಹಲ್ಲೆ ಮಾಡಿದ ಪ್ರಕರಣಗಳ ಅಡಿಯಲ್ಲಿ ದೋಷಿ ಎಂದು ತೀರ್ಪು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಕೋರ್ಟ್​ನ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್​ ಮೆಟ್ಟಿಲೇರಲು ಅವಕಾಶ ನೀಡುವುದನ್ನೂ ಅಮಾನತುಗೊಳಿಸಿದೆ. 2017ರಲ್ಲಿ ಮಧ್ಯ ಮುಂಬೈನ ಸಿಯಾನ್​ ಕೋಳಿವಾಡ ಪ್ರದೇಶದಲ್ಲಿ ಅಕ್ರಮ ವಿದ್ಯುತ್​ ಮತ್ತು ನೀರಿನ ಸಂಪರ್ಕ ಕಡಿತಗೊಳಿಸಲು ಬಿಎಂಸಿ ಅಧಿಕಾರಿಗಳು ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿತ್ತು.

For Latest News Updates, Join Our Whatsapp Community🚩
RELATED ARTICLES

Most Popular