HomeKarnatakaʼಕನ್ನಡ ರಾಜ್ಯೋತ್ಸವʼ ಪ್ರಯುಕ್ತ ರಿಯಾಯಿತಿ ದರದಲ್ಲಿ ಪುಸ್ತಕಗಳ ಮಾರಾಟ

ʼಕನ್ನಡ ರಾಜ್ಯೋತ್ಸವʼ ಪ್ರಯುಕ್ತ ರಿಯಾಯಿತಿ ದರದಲ್ಲಿ ಪುಸ್ತಕಗಳ ಮಾರಾಟ

ಶಿವಮೊಗ್ಗ: ನಗರದ ಮಲ್ಲಿಕಾರ್ಜುನ ಚಿತ್ರಮಂದಿರ ಪಕ್ಕದ ರಸ್ತೆಯಲ್ಲಿರುವ ಪ್ರಜ್ಞಾ ಬುಕ್ ಗ್ಯಾಲರಿಯಲ್ಲಿ ರಾಜ್ಯೋತ್ಸವದ ಅಂಗವಾಗಿ 2ನೇ ವರ್ಷದ ಮಹಾ ಪುಸ್ತಕ ಪ್ರದರ್ಶನ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಪ್ರಜ್ಞಾ ಬುಕ್ ಗ್ಯಾಲರಿಯ ವ್ಯವಸ್ಥಾಪಕಿ ಸೌಮ್ಯ ತಿಳಿಸಿದರು.

ಅವರು ಇಂದು ಮೀಡಿಯಾ ಹೌಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನ.1ರಿಂದ 30ರ ವರೆಗೆ ಪ್ರತಿದಿನ ಬೆಳಿಗ್ಗೆ 10ರಿಂದ ರಾತ್ರಿ 9ರವರೆಗೆ ಮೇಳ ನಡೆಯಲಿದ್ದು, ಶೇ.15ರಿಂದ 20ರ ವರೆಗೆ ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಮಾರಾಟ ಮಾಡಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಾರಿ ವಿಶೇಷವಾಗಿ ವಿದ್ಯಾರ್ಥಿಗಳ ಅಭ್ಯಾಸಕ್ಕೆ ಅನುಕೂಲವಾಗುವ ವಿವಿಧ ರೀತಿಯ ವಿಜ್ಞಾನ, ತಂತ್ರಜ್ಞಾನ, ಪರಿಸರ, ಗಣಿತ, ಸಮಾಜ ವಿಜ್ಞಾನ, ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದ ಕನ್ನಡ ಮತ್ತು ಇಂಗ್ಲಿಷ್ ಪುಸ್ತಕಗಳನ್ನು ಪ್ರದರ್ಶನಕ್ಕಿಡಲಾಗುವುದು. ರಾಜ್ಯದ ಬಹುತೇಕ ಲೇಖಕರ ಪುಸ್ತಕಗಳು ದೊರೆಯುತ್ತವೆ ಎಂದರು.

ಅರ್ಹತಾ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯ ಪುಸ್ತಕಗಳು, ಶಾಲಾ ಕಾಲೇಜು ಪಠ್ಯ ಪುಸ್ತಕ ಹಾಗೂ ಗೈಡ್, ಸಾಹಿತ್ಯ, ವೈಚಾರಿಕ ಪುಸ್ತಕಗಳು ಹಾಗೂ ಸಂಶೋಧನಾ ಗ್ರಂಥಗಳು, ಪ್ರಸಿದ್ಧ ಇಂಗ್ಲಿಷ್ ಲೇಖಕರ ಪುಸ್ತಕಗಳು, ಸ್ಟೇಷನರಿಗಳು ರಿಯಾಯಿತಿ ದರದಲ್ಲಿ ಲಭ್ಯವಿವೆ ಎಂದ ಅವರು, ಹೆಚ್ಚಿನ ಮಾಹಿತಿಗಾಗಿ ಮೊ:9844661726 ಅಥವಾ 7411272835ರಲ್ಲಿ ಸಂಪರ್ಕಿಸಬಹುದು ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ರಂಗಸ್ವಾಮಿ, ಅಶ್ವಿನಿ, ನಯನ ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular