ಬೆಂಗಳೂರು : ಚಾಮರಾಜಪೇಟೆ ‘ಈದ್ಗಾ’ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ನೀಡುವಂತೆ ಹೈಕೋರ್ಟ್ ಸೂಚನೆ ನೀಡಿದೆ.
ಹೌದು, ಚಾಮರಾಜಪೇಟೆ ‘ಈದ್ಗಾ’ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ನೀಡಬೇಕು ಎಂದು ಬೆಂಗಳೂರು ಜಿಲ್ಲಾಡಳಿತ ಹಾಗೂ ಇನ್ನಿತರ ಪ್ರಾಧಿಕಾರಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ. ಆದ್ರೆ ಕೋಮು ಸಾಮರಸ್ಯಕ್ಕೆ ಧಕ್ಕೆ ತರುವಂತಹ ಯಾವುದೇ ಕಾರ್ಯಕ್ರಮ ನಡೆಸಬಾರದು ಎಂದು ಕೋರ್ಟ್ ಸೂಚನೆ ನೀಡಿದೆ.
ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ನೀಡಬೇಕು ಎಂದು ಚಾಮರಾಜಪೇಟೆ ನಾಗರಿಕರ ಒಕ್ಕೂಟ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶ ಹೊರಡಿಸಿದೆ.
ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣೇಶ ಚತುರ್ಥಿ ಆಚರಣೆಗೆ ಪರ-ವಿರೋಧ ಜೋರಾಗಿ ಕೇಳಿಬಂದಿತ್ತು. ನಂತರ ಕನ್ನಡ ರಾಜ್ಯೋತ್ಸವ ಆಚರಿಸಲು ಪರ್ಮಿಷನ್ ಕೊಡುವಂತೆ ಪಟ್ಟು ಹಿಡಿಯಲಾಗಿತ್ತು.