HomeKarnatakaಶುಭ ಸುದ್ದಿ: ರಾಜ್ಯೋತ್ಸವ ಅಂಗವಾಗಿ ತಿಂಗಳಿಡಿ ಶೇ. 50 ರಿಯಾಯಿತಿಯಲ್ಲಿ ಪುಸ್ತಕ ಮಾರಾಟ

ಶುಭ ಸುದ್ದಿ: ರಾಜ್ಯೋತ್ಸವ ಅಂಗವಾಗಿ ತಿಂಗಳಿಡಿ ಶೇ. 50 ರಿಯಾಯಿತಿಯಲ್ಲಿ ಪುಸ್ತಕ ಮಾರಾಟ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಅಂಗವಾಗಿ ನವೆಂಬರ್ ತಿಂಗಳಿಡಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳಿಗೆ ಶೇಕಡ 50ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು.

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆ, ಎಲ್ಲಾ ಜಿಲ್ಲೆಗಳಲ್ಲಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗಳಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ರಿಯಾಯಿತಿ ಸೌಲಭ್ಯ ದೊರೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕನ್ನಡ ಪುಸ್ತಕ ಪ್ರಾಧಿಕಾರದ www.kannadapustakapradhikara.com ವೆಬ್ಸೈಟ್ ನಲ್ಲಿ ರಿಯಾಯಿತಿ ಲಭ್ಯವಿದ್ದು, ನಾಟಕಗಳು, ವ್ಯಕ್ತಿ ಚಿತ್ರಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಪರಿಸರ, ಜನಪದ, ಕೃಷಿ, ಹೀಗೆ ಹತ್ತು ಹಲವು ಪ್ರಕಾರಗಳ ಸಾಹಿತ್ಯ ಕೃತಿಗಳನ್ನು ಪ್ರಾಧಿಕಾರ ಮುದ್ರಿಸಿ ಪ್ರಕಟಿಸಿದೆ. ಜನಸಾಮಾನ್ಯರಿಗೆ ಸುಲಭ ದರದಲ್ಲಿ ಪುಸ್ತಕಗಳನ್ನು ತಲುಪಿಸುವ ಉದ್ದೇಶದೊಂದಿಗೆ ಶೇಕಡ 50ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular