HomeKarnatakaಬಹು ದಿನಗಳ ಬಳಿಕ ಮತ್ತೆ ಕ್ಯಾಮೆರಾ ಕಣ್ಣಿಗೆ ಬಿದ್ದ ಚೈತ್ರಾ; ಉಡುಪಿ ನ್ಯಾಯಾಲಯಕ್ಕೆ ಹಾಜರು...!

ಬಹು ದಿನಗಳ ಬಳಿಕ ಮತ್ತೆ ಕ್ಯಾಮೆರಾ ಕಣ್ಣಿಗೆ ಬಿದ್ದ ಚೈತ್ರಾ; ಉಡುಪಿ ನ್ಯಾಯಾಲಯಕ್ಕೆ ಹಾಜರು…!

ಉದ್ಯಮಿ ಗೋವಿಂದ ಪೂಜಾರಿಯವರಿಗೆ 5 ಕೋಟಿ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಚೈತ್ರಾರನ್ನು ಇದೀಗ ಮತ್ತೊಂದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದೆ.

ಬಟ್ಟೆ ಅಂಗಡಿ ಹಾಕಿಸಿಕೊಡುವುದಾಗಿ ಹೇಳಿ ಸುಧೀನ್ ಎಂಬವರಿಂದ ಐದು ಲಕ್ಷ ರೂಪಾಯಿ ಪಡೆದು ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬ್ರಹ್ಮಾವರ ಠಾಣೆ ಪೊಲೀಸರು ಬಾಡಿ ವಾರೆಂಟ್ ಮುಖೇನ ಚೈತ್ರಾರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಕರೆದುಕೊಂಡು ಬಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ವಿಚಾರಣೆಗಾಗಿ ಒಂದು ದಿನ ಪೊಲೀಸ್ ಕಸ್ಟಡಿಗೆ ಪಡೆದಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸರ ವಿಚಾರಣೆ ಈಗಾಗಲೇ ಮುಗಿದಿದ್ದು, ಈಗ ಚೈತ್ರಾರನ್ನು ಮತ್ತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆದುಕೊಂಡು ಹೋಗಲಾಗುತ್ತದೆ. ಬಹು ದಿನಗಳ ಬಳಿಕ ಮಾಧ್ಯಮಗಳ ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಂಡ ಚೈತ್ರಾ ಲವಲವಿಕೆಯಿಂದಲೇ ಇದ್ದು, ಕ್ಯಾಮೆರಾ ಕಾಣುತ್ತಲೇ ಕೈ ಬೀಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular