HomeKarnatakaಶುಭ ಸುದ್ದಿ: ಸಾರಿಗೆ ಇಲಾಖೆಯಲ್ಲಿ 8000 ಸಿಬ್ಬಂದಿ ನೇಮಕಾತಿ, 8000 ಹೊಸ ಬಸ್ ಖರೀದಿ

ಶುಭ ಸುದ್ದಿ: ಸಾರಿಗೆ ಇಲಾಖೆಯಲ್ಲಿ 8000 ಸಿಬ್ಬಂದಿ ನೇಮಕಾತಿ, 8000 ಹೊಸ ಬಸ್ ಖರೀದಿ

ವಿಜಯಪುರ: ಸಾರಿಗೆ ಇಲಾಖೆಯಲ್ಲಿ 8,000 ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುವುದು. 8 ಸಾವಿರ ಹೊಸ ಬಸ್ ಖರೀದಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಯೋಜನೆಯಿಂದ ಅನುಕೂಲವಾಗಿದೆ. ಹೀಗಿದ್ದರೂ ಬಿಜೆಪಿ ನಾಯಕರು ಅನಗತ್ಯವಾಗಿ ಟೀಕೆ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಳೆಯರ ಉಚಿತ ಪ್ರಯಾಣ ಸೇವೆ ಆರಂಭಿಸಿದ್ದರೂ ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಸರಿಯಾಗಿ ವೇತನ ಪಾವತಿಸುತಿದ್ದೇವೆ. ರದ್ದಾಗಿರುವ ಸಾರಿಗೆ ಸಂಚಾರ ಶೆಡ್ಯೂಲ್ ಪುನರಾರಂಭ ಅಗಲಿದ್ದು, ನಾಲ್ಕೈದು ತಿಂಗಳಲ್ಲಿ ರಾಜ್ಯದಲ್ಲಿ ಹೊಸ ಬಸ್ ಓಡಾಟ ಶುರುವಾಗಲಿದೆ ಎಂದು ತಿಳಿಸಿದ್ದಾರೆ.

5500 ಹೊಸ ಬಸ್ ಗಳನ್ನು ಖರೀದಿಸಲಾಗುತ್ತಿದೆ. 13,800 ಹೊಸ ಬಸ್ ಖರೀದಿಗೆ ಅನುಮತಿ ಕೇಳಲಾಗಿದ್ದು, 8,000 ಬಸ್ ಗಳ ಖರೀದಿಗೆ ಅನುಮತಿ ದೊರೆತಿದೆ. 13,888 ನೌಕರರು ನಿವೃತ್ತಿ ಹೊಂದಿದ್ದು, 8000 ಸಿಬ್ಬಂದಿ ನೇಮಕಾತಿ ಆಗಲಿದೆ. ಹಂತ ಹಂತವಾಗಿ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular