HomeIndiaಪಾಕ್-ಬಾಂಗ್ಲಾ ಪಂದ್ಯದ ವೇಳೆ ಈಡನ್ ಗಾರ್ಡನ್ಸ್ ನಲ್ಲಿ ಪ್ಯಾಲೆಸ್ಟ್ರೈನ್ ಧ್ವಜ ಹಾರಿಸಿ ಘೋಷಣೆ ಕೂಗಿದ ಪ್ರೇಕ್ಷಕರು!

ಪಾಕ್-ಬಾಂಗ್ಲಾ ಪಂದ್ಯದ ವೇಳೆ ಈಡನ್ ಗಾರ್ಡನ್ಸ್ ನಲ್ಲಿ ಪ್ಯಾಲೆಸ್ಟ್ರೈನ್ ಧ್ವಜ ಹಾರಿಸಿ ಘೋಷಣೆ ಕೂಗಿದ ಪ್ರೇಕ್ಷಕರು!

ಕೋಲ್ಕತ್ತಾ : ಹಮಾಸ್, ಇಸ್ರೇಲ್ ನಡುವಿನ ಯುದ್ಧ ಮುಂದುವರೆದಿದ್ದು, ಈ ನಡುವೆ  ಭಾರತದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ನಲ್ಲಿ ಪಾಕಿಸ್ತಾನ-ಬಾಂಗ್ಲಾದೇಶದ ನಡುವಿನ ಪಂದ್ಯದಲ್ಲಿ ಕೆಲವರು ಪ್ಯಾಲೆಸ್ಟ್ರೈನ್ ಧ್ವಜವನ್ನು ಹಿಡಿದು ಘೋಷಣೆಗಳನ್ನು ಕೂಗಿರುವ ಘಟನೆ ನಡೆದಿದೆ.

ವಿಶ್ವಕಪ್ 2023 ರ 31 ನೇ ಪಂದ್ಯವು ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ನಡುವೆ ಈಡನ್ ಗಾರ್ಡನ್ಸ್ನಲ್ಲಿ ನಡೆಯುತ್ತಿರುವ ವೇಳೆ ಕೆಲ ಪ್ರೇಕ್ಷಕರು ಪ್ಯಾಲೆಸ್ಟ್ರೈನ್ ಧ್ವಜವನ್ನು ಹಿಡಿದು ಪ್ಯಾಲೆಸ್ಟ್ರೈನ್ ಪರ ಘೋಷಣೆಗಳನ್ನು ಕೂಗಿರುವ ವಿಡಿಯೋ ವೈರಲ್ ಆಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಪಂದ್ಯದ ವೇಳೆ ವೈರಲ್ ಆಗಿದೆ. ಇದಕ್ಕೂ ಮುನ್ನ ಅಕ್ಟೋಬರ್ 28 ರಂದು ಈಡನ್ ಗಾರ್ಡನ್ಸ್ನಲ್ಲಿ ಬಾಂಗ್ಲಾದೇಶ ಮತ್ತು ನೆದರ್ಲ್ಯಾಂಡ್ಸ್ ನಡುವೆ ಪಂದ್ಯ ನಡೆದಿತ್ತು. ನವೆಂಬರ್ 05 ರಂದು ಈಡನ್ ಗಾರ್ಡನ್ಸ್ನಲ್ಲಿ ಟೀಮ್ ಇಂಡಿಯಾ ಶ್ರೀಲಂಕಾ ವಿರುದ್ಧ ಸೆಣಸಲಿದೆ.

For Latest News Updates, Join Our Whatsapp Community🚩
RELATED ARTICLES

Most Popular