alex Certify BREAKING : ಲುಲು ಮಾಲ್ ನಲ್ಲಿ ಯುವತಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದ ‘ನಿವೃತ್ತ ಶಿಕ್ಷಕ’ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಲುಲು ಮಾಲ್ ನಲ್ಲಿ ಯುವತಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದ ‘ನಿವೃತ್ತ ಶಿಕ್ಷಕ’ ಅರೆಸ್ಟ್

ಬೆಂಗಳೂರು : ಬೆಂಗಳೂರಿನ ಲುಲು ಮಾಲ್ ನಲ್ಲಿ ಯುವತಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದ ‘ನಿವೃತ್ತ ಶಿಕ್ಷಕ’ ನನ್ನು ಪೊಲೀಸರು ಬಂಧಿಸಿದ್ದಾರೆ.

ಅಗ್ರಹಾರ ದಾಸರಹಳ್ಳಿಯ ನಿವೃತ್ತ ಮುಖ್ಯ ಶಿಕ್ಷಕ ಅಶ್ವತ್ ನಾರಾಯಣ್ ಎಂಬಾತ ಈ ಕೃತ್ಯ ಎಸಗಿದ್ದು, ಸದ್ಯ ಈತನನ್ನು ಪೊಲೀಸರು ಬಂಧಿಸಿದ್ದಾರೆ. ಶಿವನಹಳ್ಳಿ ಬಳಿ ಶಾಲೆಯೊಂದರಲ್ಲಿ ಮುಖ್ಯ ಶಿಕ್ಷಕನಾಗಿ ನಿವೃತ್ತಿ ಹೊಂದಿದ ಶಿಕ್ಷಕ ಬೆಂಗಳೂರಿನ ಲುಲು ಮಾಲ್ ನಲ್ಲಿ ಯುವತಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದನು. ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ಈತನ ವಿರುದ್ಧ ಕ್ರಮ ಕೈಗೊಂಡು ತನಿಖೆ ನಡೆಸಿದ್ದರು. ಸದ್ಯ, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ಲುಲು ಮಾಲ್ ನಲ್ಲಿ ಯುವತಿಗೆ ಡಿಕ್ಕಿ ಹೊಡೆದು ಆಕೆಯ ಹಿಂಭಾಗವನ್ನು ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ್ದನು . ಇದನ್ನು ವ್ಯಕ್ತಿಯೊಬ್ಬರು ಸೆರೆ ಹಿಡಿದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಈ ಸಂಬಂಧ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಿಕೊಂಡು ಯುವಕನಿಂದ ಹೆಚ್ಚಿನ ಮಾಹಿತಿ ಪಡೆದು ತನಿಖೆ ಆರಂಭಿಸಿದ್ದರು. ಲುಲು ಮಾಲ್ ಅಧಿಕಾರಿ ಕೂಡ ಆರೋಪಿ ವಿರುದ್ಧ ದೂರು ನೀಡಿದ್ದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...