ಬೆಂಗಳೂರು: ರಾಜ್ಯದ ಮೂವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದೆ. ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ, ಸಂಸದ ಪಿ.ಸಿ. ಮೋಹನ್ ಅವರಿಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ.
ನಾಳೆ ದೆಹಲಿಗೆ ಬರುವಂತೆ ವರಿಷ್ಠರು ಕರೆ ಮಾಡಿ ಸೂಚನೆ ನೀಡಿದ್ದಾರೆ. ನಾಳೆ ಮಧ್ಯಾಹ್ನ 3:30ಕ್ಕೆ ಬಿಜೆಪಿ ಕಚೇರಿಯಲ್ಲಿ ಭೇಟಿಯಾಗಲು ಸೂಚನೆ ನೀಡಲಾಗಿದೆ.
ಕಳೆದ ವಾರ ಮಾಜಿ ಸಿಎಂ ಡಿ.ವಿ. ಸದಾನಂದಗೌಡ ಅವರಿಗೆ ಹೈಕಮಾಂಡ್ ಬುಲಾವ್ ನೀಡಿತ್ತು. ಆದರೆ, ದೆಹಲಿಗೆ ಹೋದರೂ ಅವರನ್ನು ಭೇಟಿ ಮಾಡದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ವಾಪಸ್ ಕಳುಹಿಸಿದ್ದರು.
ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ, ವಿಧಾನಸಭೆ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರ ಆಯ್ಕೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದೆ ಎನ್ನಲಾಗಿದೆ.