HomeKarnataka‘ಗೃಹಲಕ್ಷ್ಮಿ ಯೋಜನೆ’ ಫಲಾನುಭವಿಗಳಿಗೆ ಸಿಹಿ ಸುದ್ದಿ

‘ಗೃಹಲಕ್ಷ್ಮಿ ಯೋಜನೆ’ ಫಲಾನುಭವಿಗಳಿಗೆ ಸಿಹಿ ಸುದ್ದಿ

ಉಡುಪಿ: ಗೃಹಲಕ್ಷ್ಮಿ ಯೋಜನೆಗೆ ಹಣದ ಕೊರತೆ ಇಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಯಜಮಾನಿಯರ ಖಾತೆಗೆ ಹಣ ಜಮಾ ಮಾಡಲಾಗುತ್ತಿದೆ. ಒಂದೆರಡು ದಿನ ವಿಳಂಬ ಆಗಬಹುದು. 1.8 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು 2.500 ಕೋಟಿ ರೂ. ಸಂದಾಯ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇನ್ನು 6-7 ಮಹಿಳೆಯರು ಉಳಿದುಕೊಂಡಿದ್ದು, ಅವರಲ್ಲಿ ಎರಡು ಲಕ್ಷ ಮಂದಿ ನೋಂದಣಿ ಮಾಡಿಸಿಕೊಂಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು ಮನೆಗಳಿಗೆ ಹೋಗಿ ತಿಳಿವಳಿಕೆ ನೀಡಿ ಗೃಹಲಕ್ಷ್ಮಿ ಯೋಜನೆಗೆ ಯಜಮಾನಿಯರನ್ನು ಸೇರ್ಪಡೆ ಮಾಡುತ್ತಿದ್ದಾರೆ. ಬ್ಯಾಂಕ್ ಖಾತೆ ಸಮಸ್ಯೆ ಇದ್ದರೆ ಅಂಚೆ ಕಚೇರಿಯಲ್ಲಿ ಖಾತೆ ತೆರೆದು ಗೃಹಿಣಿಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಪಾವತಿಸಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular