HomeBusinessಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಶಾಕಿಂಗ್ ನ್ಯೂಸ್: ಹಾಲು ಖರೀದಿ ದರ 2 ರೂ. ಕಡಿತಗೊಳಿಸಿ ಆದೇಶ

ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಶಾಕಿಂಗ್ ನ್ಯೂಸ್: ಹಾಲು ಖರೀದಿ ದರ 2 ರೂ. ಕಡಿತಗೊಳಿಸಿ ಆದೇಶ

ಬೆಂಗಳೂರು: ರಾಜ್ಯೋತ್ಸವ ದಿನವೇ ಹಾಲು ಉತ್ಪಾದಕರಿಗೆ ಶಾಕಿಂಗ್ ಸುದ್ದಿ ಸಿಕ್ಕಿದೆ. ರೈತರಿಂದ ಖರೀದಿ ಮಾಡುವ ಹಾಲಿಗೆ ಪ್ರತಿ ಲೀಟರ್ ಗೆ ಎರಡು ರೂ. ಕಡಿತಗೊಳಿಸಿ ಬೆಂಗಳೂರು ಹಾಲು ಒಕ್ಕೂಟ ಆದೇಶ ಹೊರಡಿಸಿದೆ. ಇದರಿಂದಾಗಿ ಹಾಲು ಉತ್ಪಾದಕರಿಗೆ ನಷ್ಟವಾಗಲಿದೆ.

ಬರ ಪರಿಸ್ಥಿತಿಯಿಂದಾಗಿ ಮೊದಲೇ ಸಂಕಷ್ಟದಲ್ಲಿರುವ ಹಾಲು ಉತ್ಪಾದಕ ರೈತರಿಗೆ ಹಾಲಿನ ದರ ಕಡಿತಗೊಳಿಸಿ ಶಾಕ್ ನೀಡಲಾಗಿದೆ. ರೈತರಿಂದ ಬೆಂಗಳೂರು ಹಾಲು ಒಕ್ಕೂಟ ಖರೀದಿಸುವ ಪ್ರತಿ ಲೀಟರ್ ಹಾಲಿಗೆ ಅಕ್ಟೋಬರ್ 31ರವರೆಗೆ ಶೇಕಡ 4 ಫ್ಯಾಟ್, 8.5 ಸಾಂದ್ರತೆ ಇದ್ದಲ್ಲಿ 34.15 ರೂ. ದರ ನಿಗದಿ ಮಾಡಲಾಗಿತ್ತು. ನವೆಂಬರ್ 1ರಿಂದ ಇದೇ ಗುಣಮಟ್ಟದ ಹಾಲಿಗೆ 32.15 ರೂ. ದರ ನಿಗದಿಪಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜುಲೈನಲ್ಲಿ ಹಾಲಿನ ದರ ಪರಿಷ್ಕರಣೆ ಮಾಡಿದ್ದ ರಾಜ್ಯ ಸರ್ಕಾರ ಪ್ರತಿ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಿ ಇದನ್ನು ರೈತರಿಗೆ ನೀಡುವಂತೆ ಸೂಚಿಸಿತ್ತು. ಎರಡೇ ತಿಂಗಳಲ್ಲಿ ದರ ಇಳಿಕೆ ಮಾಡುವ ಮೂಲಕ ಸರ್ಕಾರ ಕೊಟ್ಟಿದ್ದ ಹೆಚ್ಚಿನ ದರವನ್ನು ಒಕ್ಕೂಟ ರೈತರಿಂದ ಕಸಿದುಕೊಂಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಯ 1.10 ಲಕ್ಷ ರೈತರಿಗೆ ನಷ್ಟವಾಗಲಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular