HomeKarnatakaGruha Lakshmi Scheme : `ಗೃಹಲಕ್ಷ್ಮಿ’ ಹಣ ಬಾರದೇ ಇರುವ ಯಜಮಾನಿಯರಿಗೆ ಗುಡ್ ನ್ಯೂಸ್ :...

Gruha Lakshmi Scheme : `ಗೃಹಲಕ್ಷ್ಮಿ’ ಹಣ ಬಾರದೇ ಇರುವ ಯಜಮಾನಿಯರಿಗೆ ಗುಡ್ ನ್ಯೂಸ್ : ಈ ಖಾತೆಗೆ ಜಮಾ ಆಗುತ್ತೆ 2,000 ರೂ.!

ಉಡುಪಿ : ಖಾತೆಗೆ ಹಣ ಬಾರದೇ ಇರುವ ಯಜಮಾನಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿಸುದ್ದಿನೀಡಿದ್ದು, ಅಂಚೆ ಕಚೇರಿಯಲ್ಲಿ ಖಾತೆ ತೆರೆದು ಗೃಹಲಕ್ಷ್ಮಿ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತೆಯರು ಮನೆಗಳಿಗೆ ಹೋಗಿ ತಿಳಿವಳಿಕೆ ನೀಡಿ ಗೃಹಲಕ್ಷ್ಮಿ ಯೋಜನೆಗೆ ಯಜಮಾನಿಯರನ್ನು ಸೇರ್ಪಡೆ ಮಾಡುತ್ತಿದ್ದಾರೆ. ಬ್ಯಾಂಕ್ ಖಾತೆ ಸಮಸ್ಯೆ ಇದ್ದರೆ ಅಂಚೆ ಕಚೇರಿಯಲ್ಲಿ ಖಾತೆ ತೆರೆದು ಗೃಹಿಣಿಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಪಾವತಿಸಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಯಜಮಾನಿಯರ ಖಾತೆಗೆ ಹಣ ಜಮಾ ಮಾಡಲಾಗುತ್ತಿದೆ. ಒಂದೆರಡು ದಿನ ವಿಳಂಬ ಆಗಬಹುದು. 1.8 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು 2.500 ಕೋಟಿ ರೂ. ಸಂದಾಯ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. 6-7 ಲಕ್ಷ ಮಹಿಳೆಯರು ಉಳಿದುಕೊಂಡಿದ್ದು, ಅವರಲ್ಲಿ ಎರಡು ಲಕ್ಷ ಮಂದಿ ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular