ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 68 ಗಣ್ಯರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರು.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳಿಗೆ ಪ್ರತಿ ವರ್ಷವು ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವ ಸಂಪುದಾಯವನ್ನು ಸರ್ಕಾರವು ಅನುಸರಿಸಿಕೊಂಡು ಬಂದಿರುತ್ತದೆ. ಅದರಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ 2023ನೇ ಸಾಲಿನಲ್ಲಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲು ಸರ್ಕಾರವು ನಿರ್ಧರಿಸಿ ಆದೇಶ ಹೊರಡಿಸಿತ್ತು.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗಿದೆ. 5 ಲಕ್ಷ ರೂ. ನಗದು, 25 ಗ್ರಾಂ ಚಿನ್ನ ಹಾಗೂ ಪ್ರಶಸ್ತಿಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮಾಡಿದ್ದಾರೆ. ಇಸ್ರೋ ಮುಖ್ಯಸ್ಥ ಸೋಮನಾಥ್, ಡಿಂಗ್ರಿ ನಾಗರಾಜ್, ಬ್ಯಾಂಕ್ ಜನಾರ್ದನ್ ಸೇರಿದಂತೆ 68 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಇಲಾಖೆ ಸಚಿವ ಡಾ. ಜಿ.ಪರಮೇಶ್ವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ಉನ್ನತ ಶಿಕ್ಷಣ ಇಲಾಖೆ ಸಚಿವ ಸುಧಾಕರ್ ಮತ್ತಿತರಿದ್ದರು.