HomeKarnatakaBIG NEWS: ಬ್ಯಾಂಕ್ ಸಿಬ್ಬಂದಿ ಕಿರುಕುಳ; ದೌರ್ಜನ್ಯಕ್ಕೆ ಹೆದರಿ ಆಸ್ಪತ್ರೆಗೆ ದಾಖಲಾಗಿದ್ದ ರೈತ ಸಾವು

BIG NEWS: ಬ್ಯಾಂಕ್ ಸಿಬ್ಬಂದಿ ಕಿರುಕುಳ; ದೌರ್ಜನ್ಯಕ್ಕೆ ಹೆದರಿ ಆಸ್ಪತ್ರೆಗೆ ದಾಖಲಾಗಿದ್ದ ರೈತ ಸಾವು

ಹುಬ್ಬಳ್ಳಿ: ಸಾಲ ಪಾವತಿಸುವಂತೆ ಬ್ಯಾಂಕ್ ಸಿಬ್ಬಂದಿಗಳು ನೀಡುತ್ತಿದ್ದ ಕಿರುಕುಳಕ್ಕೆ ಹೆದರಿ ಆಸ್ಪತ್ರೆಗೆ ದಾಖಲಾಗಿದ್ದ ರೈತರೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಮಹದೇವಪ್ಪ ಜಾಪೂರ (75) ಮೃತ ದುರ್ದೈವಿ. ಬ್ಯಾಂಕ್ ಸಿಬ್ಬಂದಿಗಳ ದೌರ್ಜನ್ಯಕ್ಕೆ ಕಂಗಾಲಾಗಿದ್ದ ಮಹದೇವಪ್ಪ ಅನಾರೋಗ್ಯದಿಂದ ಹುಬ್ಬಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹದೇವಪ್ಪ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮದ ನಿವಾಸಿಯಾಗಿದ್ದ ಮಹದೇವಪ್ಪ, ಕಳೆದ ಒಂದು ವಾರದ ಹಿಂದೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಆಸ್ಪತ್ರೆಯಲ್ಲಿಯೆ ಕೊನೆಯುಸಿರೆಳೆದಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular