ವಿಜಯನಗರ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಎರಡುವರೆ ವರ್ಷಗಳ ಬಳಿಕ ಅಧಿಕಾರ ಹಂಚಿಕೆಯಾಗಲಿದೆ ಎಂಬ ಮಾತು ಇತ್ತೀಚೆಗೆ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಯಾಗುತ್ತಿತ್ತು. ಈ ಗೊಂದಲಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸದ್ಯ ನಾನೇ ಮುಖ್ಯಮಂತ್ರಿ, ಸಿಎಂ ಆಗಿ ನಾನೇ ಮುಂದುವರೆಯುತ್ತೇನೆ. 5 ವರ್ಷಗಳ ಕಾಲ ನಮ್ಮ ಸರ್ಕಾರ ಸುಭದ್ರವಾಗಿ ಇರುತ್ತದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಈ ಮೂಲಕ ಎರಡುವರೆ ವರ್ಷದ ಬಳಿಕ ಅಧಿಕಾರ ಹಂಚಿಕೆ ಗೊಂದಲಗಳಿಗೆ ಸಿಎಂ ತೆರೆ ಎಳೆದಿದ್ದಾರೆ. ಇದೇ ವೇಳೆ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸುವುದು ಹೈಕಮಾಂಡ್ ಗೆ ಬಿಟ್ಟ ನಿರ್ಧಾರ ಎಂದು ತಿಳಿಸಿದ್ದಾರೆ.
ಹೈಕಮಾಂಡ್ ನಾಯಕರಾದ ರಣದೀಪ್ ಸುರ್ಜೆವಾಲಾ, ಕೆ.ಸಿ.ವೇಣುಗೋಪಾಲ್ ರಾಜ್ಯಕ್ಕೆ ಬಂದು ಹೋದ ಮಾರನೆ ದಿನವೇ ಸಿಎಂ ಸಿದ್ದರಾಮಯ್ಯ ಮುಖ್ಯಂತ್ರಿಯಾಗಿ ನಾನೇ ಮುಂದುವರೆಯುತ್ತೇನೆ ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕರಿಗೆ ನೇರ ಸಂದೇಶ ರವಾನಿಸಿದ್ದಾರೆ.