HomeKarnatakaಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಸೆಮಿಸ್ಟರ್ ಬದಲಿಗೆ ಶೈಕ್ಷಣಿಕ ವರ್ಷಕ್ಕೆ ನೇಮಕಾತಿ

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಸೆಮಿಸ್ಟರ್ ಬದಲಿಗೆ ಶೈಕ್ಷಣಿಕ ವರ್ಷಕ್ಕೆ ನೇಮಕಾತಿ

 ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಿಗೆ ಸೆಮಿಸ್ಟರ್ ಬದಲಿಗೆ ಶೈಕ್ಷಣಿಕ ವರ್ಷಕ್ಕೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆಗೆ ಸರ್ಕಾರ ಆದೇಶಿಸಿದೆ.

ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವಾಗ ಸೆಮಿಸ್ಟರ್ ಅವಧಿಗೆ ಬದಲಾಗಿ ಆಯಾ ಶೈಕ್ಷಣಿಕ ವರ್ಷಕ್ಕೆ ಅನ್ವಯಿಸುವಂತೆ ನೇಮಕ ಮಾಡಿಕೊಳ್ಳಲು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗಾಗಲೇ ಪ್ರತಿ ವರ್ಷ ಶೈಕ್ಷಣಿಕ ವರ್ಷಕ್ಕೆ ಅನ್ವಯಿಸಿ ನೇಮಕ ಮಾಡಲಾಗುತ್ತಿದೆ. ಆದರೆ, ಅಧಿಕೃತ ಆದೇಶ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾಶಂಕರ ಅವರು ಅಧಿಕೃತ ಆದೇಶ ನೀಡಿದ್ದಾರೆ. 2023-24ನೇ ಸಾಲಿನ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular