HomeKarnatakaಮಾಜಿ ಸಚಿವ ರಮೇಶ್ ಜಾರಕಿಹೊಳಿ ತೇಜೋವಧೆ ಮಾಡಿದವರ ಬಂಧನಕ್ಕೆ ಆಗ್ರಹ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ತೇಜೋವಧೆ ಮಾಡಿದವರ ಬಂಧನಕ್ಕೆ ಆಗ್ರಹ

ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ತೇಜೋವಧೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಒತ್ತಾಯಿಸಿದೆ.

ರಮೇಶ್ ಜಾರಕಿಹೊಳಿ ಅವರನ್ನು ಅವಮಾನಿಸಲು ಪೋಸ್ಟರ್ ಅಂಟಿಸಿ ತೇಜೋವಧೆ ಮಾಡಿದವರನ್ನು ಬಂಧಿಸಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಬಿಜೆಪಿ ಮುಖಂಡರು ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೂರು ಸಲ್ಲಿಸಿದ ನಂತರ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಅವರು, ರಮೇಶ ಜಾರಕಿಹೊಳಿಯವರ ಮನೆ ಗೋಡೆಗೆ ಪೋಸ್ಟರ್ ಅಂಟಿಸಿದ ಕೃತ್ಯದ ಹಿಂದೆ ಯಾರೋ ದೊಡ್ಡ ನಾಯಕರ ಕೈವಾಡ ಇದೆ ಎಂದು ಆರೋಪಿಸಿದ್ದಾರೆ.

ಪೋಸ್ಟರ್ ಅಂಟಿಸಿದವರನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪೋಲಿಸ್ ಆಯುಕ್ತರಿಗೆ ದೂರು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಮೊದಲಾದವರು ಇದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular