HomeKarnatakaBIG NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ; ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡು ಹೊತ್ತಿಕೊಂಡ ಬೆಂಕಿ

BIG NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ; ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡು ಹೊತ್ತಿಕೊಂಡ ಬೆಂಕಿ

ಬೆಂಗಳೂರು: ಬೆಂಗಳೂರಿನ ಆನೇಕಲ್ ನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಿಲಿಂಡರ್ ಸ್ಫೋಟದ ವೇಳೆ ರಾಜೇಂದ್ರ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ವೇಳೆ ರಾಜೆಂದ್ರ ಹಾಗೂ ಅವರ ಮಗಳು ಮನೆಯಲ್ಲಿ ಇದ್ದರು. ಎಂದಿನಂತೆ ಬೆಳಿಗ್ಗೆ ಗ್ಯಾಸ್ ಆನ್ ಮಾಡುತ್ತಿದ್ದಂತೆ ಏಕಾಏಕಿ ಬ್ಲಾಸ್ಟ್ ಆಗಿ ಬೆಂಕಿ ಹೊತ್ತಿಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ 3-4 ಮನೆಗಳಿಗೂ ಹಾನಿಯಾಗಿದೆ.ಮನೆಯಲ್ಲಿದ್ದ ವಸ್ತುಗಳು, ಬಾಗಿಲುಗಳು ಸಂಪೂರ್ಣ ಛಿದ್ರ ಛಿದ್ರವಾಗಿದ್ದು, ಮನೆಯ ಮುಂದಿದ್ದ ಕಾರು, ಬೈಕ್ ಗಳು ಹಾನಿಯಾಗಿವೆ.

For Latest News Updates, Join Our Whatsapp Community🚩
RELATED ARTICLES

Most Popular