HomeKarnatakaBIG NEWS: ಅಧಿಕಾರ ಹಂಚಿಕೆ ವಿಚಾರ; ಕುತೂಹಲ ಮೂಡಿಸಿದ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

BIG NEWS: ಅಧಿಕಾರ ಹಂಚಿಕೆ ವಿಚಾರ; ಕುತೂಹಲ ಮೂಡಿಸಿದ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

ಮೈಸೂರು: ಸದ್ಯ ನಾನೇ ಸಿಎಂ, ಮುಖ್ಯಮಂತ್ರಿಯಾಗಿ ನಾನೇ ಮುಂದುವರೆಯುತ್ತೇನೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ರಾಜ್ಯ ಕಾಂಗ್ರೆಸ್ ನಾಯಕರು ತಮ್ಮದೇ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಅಧಿಕಾರ ಹಂಚಿಕೆ ವಿಚಾರವಾಗಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಸದ್ಯ ನಾನು ಸಿಎಂ ಆಗಿದ್ದೇನೆ. ನಾನೇ ಮುಂದುವರೆಯುತ್ತೇನೆ. ನಮ್ಮ ಸರ್ಕಾರ 5 ವರ್ಷ ಸುಭದ್ರವಾಗಿ ಆಡಳಿತ ನೀಡಲಿದೆ ಎಂದು ಹೇಳಿದ್ದರು. ಈ ಮೂಲಕ ಅಧಿಕಾರ ಹಂಚಿಕೆ ಮಾತನಾಡುತ್ತಿದ್ದ ಕಾಂಗ್ರೆಸ್ ನಾಯಕರಿಗೆ ಪರೋಕ್ಷವಾಗಿ ಸಂದೇಶ ರವಾನಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೀಗ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ, ಸಿದ್ದರಾಮಯ್ಯ ಅವರು ಹೇಳಿದ್ದು ವೈಯಕ್ತಿಕ ಅಭಿಪ್ರಾಯ. ಎಲ್ಲರಿಗೂ ಅಭಿಪ್ರಾಯಗಳನ್ನು ಹೇಳಲು ಸ್ವಾತಂತ್ರ್ಯವಿದೆ. ತಪ್ಪೇನಿಲ್ಲ ಎಂದು ತಿಳಿಸಿದ್ದಾರೆ.

ಹೈಕಮಾಂಡ್ ನೀನು ಸಿಎಂ ಆಗು ಎಂದು ನನಗೆ ಹೇಳಿದರೆ ನಾನೂ ಸಿಎಂ ಆಗಲು ಸಿದ್ಧ. ಯಾರು ಮುಂದುವರೆಯಬೇಕು ಎಂಬುದನ್ನು ಹೈಕಮಾಂಡ್ ನಿರ್ಧರ ಮಾಡುತ್ತದೆ. ದೆಹಲಿಯಲ್ಲಿ ನಾಲ್ವರು ನಾಯಕರು ಚರ್ಚೆ ಮಾಡಿದ್ದಾರೆ. ಅವರಿಗೆ ಮಾತ್ರ ಈ ವಿಚಾರದ ಬಗ್ಗೆ ಸ್ಪಷ್ಟತೆ ಇದೆ. ಉಳಿದಂತೆ ಎಲ್ಲರೂ ಅವರದ್ದೇ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular