ಬೆಂಗಳೂರು : ಗೃಹ ಸಚಿವ ಪರಮೇಶ್ವರ್ ಗೆ ಮಂತ್ರಿಯಾಗುವ ಅವಕಾಶವಿದೆ ಎಂದು ಸಚಿವ ಕೆ ಎನ್ ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.
ಒಂದೆಡೆ ನಾನೇ ಸಿಎಂ ಆಗಿ 5 ವರ್ಷ ಮುಂದುವರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ರೆ, ಇನ್ನೊಂದೆಡೆ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಕೆಲವರು ಹೇಳಿಕೆ ನೀಡುತ್ತಿದ್ದಾರೆ. ಇದೀಗ ಗೃಹ ಸಚಿವ ಪರಮೇಶ್ವರ್ ಗೆ ಮಂತ್ರಿಯಾಗುವ ಅವಕಾಶವಿದೆ ಎಂದು ಸಚಿವ ಕೆ ಎನ್ ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ‘ ಪರಮೇಶ್ವರ್ ಈಗ ಮಂತ್ರಿ ಆಗಿದ್ದಾರೆ, ಮುಂದೆ ಏನು ಬೇಕಾದರೂ ಆಗಬಹುದು. ನಮ್ಮ ಜಿಲ್ಲೆಯಿಂದ ಒಬ್ಬರು ಸಿಎಂ ಆದರೆ ಸಂತೋಷ ಪಡುತ್ತೇನೆ. ನಾವೆಲ್ಲ ಸಿದ್ದರಾಮಯ್ಯ ಪರ ಸಿದ್ದರಾಮಯ್ಯ ಬಿಟ್ಟರೆ ಪರಮೇಶ್ವರ್ ಸಿಎಂ ಆಗಲಿ ಎಂದರು. ಪಕ್ಷದ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್ ಸಚಿವರು, ಶಾಸಕರಿಗೆ ಹೈಕಮಾಂಡ್ ವಾರ್ನಿಂಗ್ ಮಾಡಿದರೂ ಕೂಡ ನಾಯಕರು ಪದೇ ಪದೇ ಹೇಳಿಕೆ ನೀಡುತ್ತಿದ್ದಾರೆ.