HomeKarnatakaSHOCKING NEWS: ಪತ್ನಿಯೊಂದಿಗೆ ಜಗಳವಾಡಿ ಆತ್ಮಹತ್ಯೆಗೆ ಶರಣಾದ ಪತಿ

SHOCKING NEWS: ಪತ್ನಿಯೊಂದಿಗೆ ಜಗಳವಾಡಿ ಆತ್ಮಹತ್ಯೆಗೆ ಶರಣಾದ ಪತಿ

ಹುಬ್ಬಳ್ಳಿ: ಪತಿ ಹಾಗೂ ಪತ್ನಿ ನಡುವಿನ ಜಗಳ ಪತಿಯ ಆತ್ಮಹತ್ಯೆಯಲ್ಲಿ ಅಂತ್ಯವಾಗಿದೆ. 11 ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಜೋಡಿ ಕೌಟುಂಬಿಕ ಕಲಹದಿಂದಾಗಿ ಬೇರ್ಪಟ್ಟು ಈಗ ಸಾವಿನಲ್ಲಿ ಕೊನೆಯಾಗಿದೆ.

ನಿಖಿಲ್ (28) ಆತ್ಮಹತ್ಯೆ ಮಾಡಿಕೊಂಡವರು. ನಿಖಿಲ್ ಹಾಗೂ ಪ್ರೀತಿ 11 ತಿಂಗಳ ಹಿಂದೆ ವಿವಾಹವಾಗಿದ್ದರು. ಪತಿ ಹಾಗೂ ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತು. ಕೌಟುಂಬಿಕ ಕಲಹಕ್ಕೆ ಬೇಸತ್ತ ಪತ್ನಿ ಪ್ರೀತಿ ತವರು ಮನೆ ಸೇರಿದ್ದಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರೀತಿ ಕುಟುಂಬದವರು ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಪೊಲೀಸರು ನಿಖಿಲ್ ಗೆ ತಾಕೀತು ಮಾಡಿದ್ದರಂತೆ. ಪೊಲೀಸ್ ಠಾಣೆಯಿಂದ ಮನೆಗೆ ವಾಪಸ್ ಆದ ನಿಖಿಲ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

For Latest News Updates, Join Our Whatsapp Community🚩
RELATED ARTICLES

Most Popular