ನವದೆಹಲಿ: ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ್ಕೆ ಮತ್ತೆ ಹಿನ್ನಡೆಯಾಗಿದೆ. CWRC ನೀಡಿದ್ದ ಆದೇಶವನ್ನು CWMA ಎತ್ತಿ ಹಿಡಿದಿದ್ದು, ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿದೆ.
ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕರ-CWMA ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ರಾಜ್ಯದ ಪರ ಅಧಿಕಾರಿಗಳು ವಾದ ಮಂಡಿಸಿದ್ದರು. ಆದರೂ ರಾಜ್ಯಕ್ಕೆ ಹಿನ್ನಡೆಯಾಗಿದ್ದು, ಪ್ರತಿದಿನ ತಮಿಳುನಾಡಿಗೆ 2,600 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಿದೆ.
ನವೆಂಬರ್ 1ರಿಂದ 23ವರೆಗೆ ಪ್ರತಿದಿನ ತಮಿಳುನಾಡಿಗೆ 2,600 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಆದೇಶ ನೀಡಿದೆ. ಈ ಮೂಲಕ CWRC ಆದೇಶವನ್ನು CWMA ಎತ್ತಿ ಹಿಡಿದಿದೆ.