ಬೆಂಗಳೂರು: ಎಲ್ಲ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪದವಿ ಪೂರ್ವ, ಪದವಿ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಉಚಿತ ಪ್ರವೇಶ ಕಲ್ಪಿಸಲಾಗುವುದು.
ಎಲ್ಲಾ ಅರ್ಹ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಯೋಜನೆ ಜಾರಿಗೊಳಿಸಲಾಗಿದೆ.
ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ವಾರ್ಷಿಕ ಆದಾಯ ಮಿತಿ 2.50 ಲಕ್ಷ ರೂ. ಒಳಗಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಕೇಂದ್ರ ಪುರಸ್ಕೃತ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
ಎಲ್ಲ ಅರ್ಹ ಅರ್ಜಿದಾರರಿಗೆ ಫ್ರೀಷಿಪ್ ಕಾರ್ಡ್ ಮಂಜೂರು ಮಾಡಲಾಗುವುದು.
ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ. ಒಳಗಿರುವ ಪರಿಶಿಷ್ಟ ಜಾತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಎಲ್ಲ ಮೆಟ್ರಿಕ್ ನಂತರದ ಕೋರ್ಸುಗಳಿಗೆ ಉಚಿತ ಪ್ರವೇಶ ಇರುತ್ತದೆ. ಯಾವುದೇ ಶಿಕ್ಷಣ ಸಂಸ್ಥೆ ಪರಿಶಿಷ್ಟ ಜಾತಿ ವಿದ್ಯಾರ್ಥಿಯಿಂದ ಮರುಪಾವತಿ ಮಾಡಲಾಗುವ ಶುಲ್ಕಗಳನ್ನು ಹೊರತುಪಡಿಸಿ ಇತರೆ ಕಡ್ಡಾಯ ಶುಲ್ಕಗಳನ್ನು ಆರಂಭದಲ್ಲಿಯೇ ಪಾವತಿಸುವಂತೆ ಒತ್ತಾಯ ಮಾಡುವಂತಿಲ್ಲ.
https://ssp.postmatric.karnataka.gov.in ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸುವುದು. ಸಹಾಯವಾಣಿ ಸಂಖ್ಯೆ 9482300400 ಸಂಪರ್ಕಿಸಬಹುದು.