HomeKarnatakaಸಾರ್ವಜನಿಕರೇ ಗಮನಿಸಿ : ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ `ಅರ್ಜಿ ಸಲ್ಲಿಕೆ’ ಅವಧಿ ವಿಸ್ತರಣೆ

ಸಾರ್ವಜನಿಕರೇ ಗಮನಿಸಿ : ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ `ಅರ್ಜಿ ಸಲ್ಲಿಕೆ’ ಅವಧಿ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಅವಧಿಯನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದೆ.

 ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಮಡಿವಾಳ ಸಮುದಾಯ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಜನರಿಂದ ಆರ್ಥಿಕ ನೆರವು ಯೋಜನೆಯಡಿ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಸೇವಾ ಸಿಂಧು ತಂತ್ರಾಂಶದ ಮೂಲಕ ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು ನ. 02 ರಿಂದ ನ. 10 ರವರೆಗೆ ವಿಸ್ತರಿಸಲಾಗಿದ್ದು, ಆಸಕ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸಕ್ತ ಫಲಾಪೇಕ್ಷಿಗಳು ಅಗತ್ಯ ದಾಖಲೆಗಳೊಂದಿಗೆ ವೆಬ್‍ಸೈಟ್ https://sevasindhu.karnataka.gov.in  ರ ಮೂಲಕ ನ.10 ರೊಳಗೆ ಅರ್ಜಿಗಳನ್ನು ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular